ನೆಹರೂ ಭಾರತಕ್ಕೆ ಅಡಿಪಾಯ ಹಾಕಿದ ಅತ್ಯುನ್ನತ ದಾರ್ಶನಿಕ: ರಾಹುಲ್ ಗಾಂಧಿ
ಹೊಸದಿಲ್ಲಿ, ನ. 14: ಭಾರತದ ಮೊದಲ ಪ್ರಧಾನಿ ಜವಾಹರ್ಲಾಲ್ ನೆಹರೂ ಅವರು ಸಹೋದರತ್ವ, ಸಮತಾವಾದ ಹಾಗೂ ಆಧುನಿಕ ದೃಷ್ಟಿಕೋನದೊಂದಿಗೆ ದೇಶಕ್ಕೆ ಅಡಿಪಾಯ ಹಾಕಿದ ಅತ್ಯುನ್ನತ ದಾರ್ಶನಿಕರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಜವಾಹರ್ಲಾಲ್ ನೆಹರೂ ಅವರ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಶನಿವಾರ ಅವರಿಗೆ ಗೌರವ ಸಲ್ಲಿಸಿದರು.
‘‘ಇಂದು ಭಾರತ ಮೊದಲ ಪ್ರಧಾನಿ ಪಂಡಿತ್ ಜವಾಹರ್ಲಾಲ್ ನೆಹರೂಜಿ ಅವರ ಜನ್ಮ ದಿನಾಚರಣೆ ಆಚರಿಸುತ್ತಿದೆ’’ ಎಂದು ಅವರು ಹೇಳಿದ್ದಾರೆ.
ನಮ್ಮ ಪ್ರಯತ್ನ ಅವರ ಮೌಲ್ಯಗಳನ್ನು ಸಂರಕ್ಷಿಸುವ ದಿಶೆಯಲ್ಲಿ ಇರಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Next Story