ಬಿಹಾರ ಸಿಎಂ ಆಗಿ ಮುಂದುವರಿಯಲಿದ್ದಾರೆಯೇ ನಿತೀಶ್ ಕುಮಾರ್?
ಎಲ್ಲವನ್ನೂ ನಿರ್ಧರಿಸಲಿದೆ ಇವತ್ತಿನ ಈ ಸಭೆ
ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರೇ ಮುಂದುವರಿಯಲಿದ್ದಾರೆಯೇ ಎನ್ನುವುದು ಇಂದು ನಡೆಯಲಿರುವ ಎನ್ ಡಿಎ ಶಾಸಕಾಂಗ ಸಭೆಯಲ್ಲಿ ನಿರ್ಧಾರವಾಗಲಿದೆ.
ಬಿಜೆಪಿ-ಜೆಡಿಯು ಮೈತ್ರಿಕೂಟ ಬಿಹಾರ ಚುನಾವಣೆಯಲ್ಲಿ ಅಧಿಕಾರಕ್ಕೇರಲು ಬೇಕಾದ ಬಹುಮತ ಗಳಿಸಿದ್ದು, ಈ ಹಿನ್ನೆಲೆಯಲ್ಲಿ ಸಭೆ ನಡೆಯಲಿದೆ. ಈಗಾಗಲೇ ನಿತೀಶ್ ಕುಮಾರ್ ಅವರು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
“ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನಿರ್ಧಾರಗಳನ್ನು ಕೈಗೊಳ್ಳಲಾಗುವುದು” ಎಂದು ಎನ್ ಡಿಎ ನಾಯಕರ ಭೇಟಿಯ ಬಳಿಕ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದರು.
Next Story