ದೇಶದಲ್ಲಿ 41,100 ಹೊಸ ಕೊರೋನ ಪ್ರಕರಣಗಳು ಪತ್ತೆ
ಹೊಸದಿಲ್ಲಿ, ನ. 15: ಕಳೆದ 24 ಗಂಟೆಗಳಲ್ಲಿ 41,100 ಹೊಸ ಕೊರೋನ ಸೋಂಕಿನ ಪ್ರಕರಣಗಳು ವರದಿಯಾಗುವುದರೊಂದಿಗೆ ಭಾರತದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 88,14,579ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 447 ಸಾವು ವರದಿಯಾಗುವುದರೊಂದಿಗೆ ಕೊರೋನ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,29,635ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,503 ಕೊರೋನ ಸೋಂಕಿನ ಪ್ರಕರಣಗಳು ಇಳಿಕೆಯಾದ ಬಳಿಕ ಕೊರೋನ ಸೋಂಕಿನ ಸಕ್ರಿಯ ಪ್ರಕರಣ ಸಂಖ್ಯೆ 4,79,216 ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 42,156 ಆಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 82,05,728 ಆಗಿದೆ. ಮಹಾರಾಷ್ಟ್ರದಲ್ಲಿ ಇದುವರೆಗೆ 85,045 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 16,09,607 ಮಂದಿ ಗುಣಮುಖರಾಗಿದ್ದಾರೆ ಹಾಗೂ 45,809 ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಇದುವರೆಗೆ 28,045 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 8,18,392 ಜನರು ಗುಣಮುಖರಾಗಿದ್ದಾರೆ ಹಾಗೂ 11,491 ಜನರು ಮೃತಪಟ್ಟಿದ್ದಾರೆ. ಹೊಸದಿಲ್ಲಿಯಲ್ಲಿ 44,329 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 7,423 ಜನರು ಸಾವನ್ನಪ್ಪಿದ್ದಾರೆ. 4,23,078 ಜನರು ಗುಣಮುಖರಾಗಿದ್ದಾರೆ. ಕೇರಳದಲ್ಲಿ 77,508 ಸಕ್ರಿಯ ಪ್ರಕರಣಗಳು ದಾಖಲಾಗಿವೆ. 4,34,730 ಜನರು ಗುಣಮುಖರಾಗಿದ್ದಾರೆ ಹಾಗೂ 1,822 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ನವೆಂಬರ್ 14ರ ವರೆಗೆ ಒಟ್ಟು 12,48,36,819 ಮಾದರಿಗಳ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 8,05,589 ಮಾದರಿಗಳನ್ನು ಶನಿವಾರ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ.