ಕೊರೋನ ನಿಯಮ ಉಲ್ಲಂಘನೆ: ಗಾಯಕನ ಸಹಿತ 13 ಜನರ ವಿರುದ್ಧ ಎಫ್ಐಆರ್
ಗಾಂಧೀನಗರ, ಡಿ.13: ಗುಜರಾತ್ನ ಮೆಹ್ಸಾನಾ ಜಿಲ್ಲೆಯಲ್ಲಿ ವಿವಾಹ ಕಾರ್ಯಕ್ರಮದ ಸಂದರ್ಭ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಜಾರಿಗೊಳಿಸಿದ ನಿಯಮ ಉಲ್ಲಂಘಿಸಿದ ಆರೋಪದಲ್ಲಿ ಜನಪ್ರಿಯ ಜಾನಪದ ಗಾಯಕ ಹಾಗೂ ಇತರ 13 ಜನರ ವಿರುದ್ಧ ಎಫ್ಐಆರ್ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.
ಸಂಗೀತ ಕಾರ್ಯಕ್ರಮದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗಿತ್ತು. ಗಾಯಕನ ಹಾಡಿಗೆ ಹಲವು ಮಂದಿ ನೃತ್ಯ ಮಾಡಿದ್ದು ಈ ಸಂದರ್ಭ ಮಾಸ್ಕ್ ಧರಿಸದೆ, ಸುರಕ್ಷಿತ ಅಂತರ ಪಾಲಿಸದೆ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. 14 ಆರೋಪಿಗಳಲ್ಲಿ 8 ಮಂದಿಯನ್ನು ಬಂಧಿಸಲಾಗಿದೆ. ಗಾಯಕನ ಬಂಧನವಾಗಬೇಕಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Next Story