ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಬಿಜೆಪಿಗೆ ಸೇರ್ಪಡೆ
ಚೆನ್ನೈ: ಭಾರತದ ಮಾಜಿ ಕ್ರಿಕೆಟಿಗ ಲಕ್ಷ್ಮಣ್ ಶಿವರಾಮಕೃಷ್ಣನ್ ಬುಧವಾರ ಭಾರತೀಯ ಜನತಾ ಪಕ್ಷವನ್ನು ಸೇರಿದ್ದಾರೆ.
ಶಿವರಾಮಕೃಷ್ಣನ್ ತನ್ನ 17ನೇ ವಯಸ್ಸಿನಲ್ಲಿ ವೆಸ್ಟ್ಇಂಡೀಸ್ ವಿರುದ್ಧ ಟೆಸ್ಟ್ ಕ್ರಿಕೆಟ್ ಗೆ ಕಾಲಿಟ್ಟಿದ್ದರು. 9 ಟೆಸ್ಟ್ ಪಂದ್ಯಗಳಲ್ಲಿ 26 ವಿಕೆಟ್ ಗಳನ್ನು ಪಡೆದಿದ್ದರು. 15 ಏಕದಿನ ಪಂದ್ಯಗಳಲ್ಲೂ ಆಡಿದ್ದ ಅವರು 1987ರಲ್ಲಿ ಕ್ರಿಕೆಟ್ ನಿಂದ ನಿವೃತ್ತಿಯಾಗಿದ್ದರು.ನಿವೃತ್ತಿಯ ಬಳಿಕ ಕ್ರಿಕೆಟ್ ವೀಕ್ಷಕವಿವರಣೆ ನೀಡಲು ಆರಂಭಿಸಿದ್ದರು.
Next Story