ಜಮ್ಮುಕಾಶ್ಮೀರ: ಪಾಕ್ನಿಂದ ಶೆಲ್, ಗುಂಡಿನ ದಾಳಿ ಯೋಧ; ಹುತಾತ್ಮ
ಜಮ್ಮು, ಜ. 1: ಜಮ್ಮು ಹಾಗೂ ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿರುವ ಮುಂಚೂಣಿ ಠಾಣೆ ಮೇಲೆ ಪಾಕಿಸ್ತಾನ ಸೇನೆ ಶುಕ್ರವಾರ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿದ ಪರಿಣಾಮ ಯೋಧನೋರ್ವ ಸಾವನ್ನಪ್ಪಿದ್ದಾರೆ.
ಜಿಲ್ಲೆಯ ನೌಶೇರಾ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಸಂಜೆ 3.30 ಹಾಗೂ 5.30ಕ್ಕೆ ಶೆಲ್ ಹಾಗೂ ಗುಂಡಿನ ದಾಳಿ ನಡೆಸಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಭಾರತದ ಸೇನೆ ಸೂಕ್ತ ಪ್ರತ್ಯುತ್ತರ ನೀಡಿತು. ಈ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಗಂಭೀರ ಗಾಯಗೊಂಡಿದ್ದ ಯೋಧ ರವಿಂದರ್ ಅನಂತರ ಸಾವನ್ನಪ್ಪಿದರು ಎಂದು ಅವರು ತಿಳಿಸಿದ್ದಾರೆ.
Next Story