ಕೋಲ್ಕತಾದ ಅಪೋಲೊ ಆಸ್ಪತ್ರೆಗೆ ದಾಖಲಾದ ಸೌರವ್ ಗಂಗುಲಿ
ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗುಲಿ ಅವರಿಗೆ ಮತ್ತೊಮ್ಮೆ ಎದೆನೋವು ಕಾಣಿಸಿಕೊಂಡ ಕಾರಣ ಕೋಲ್ಕತದ ಅಪೋಲೊ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.
ಭಾರತದ ಮಾಜಿ ನಾಯಕ ಇತ್ತೀಚೆಗೆ ಎದೆ ನೋವು ಕಾಣಿಸಿಕೊಂಡ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದರು. ಆ ಬಳಿಕ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿದ್ದರು. ವೈದ್ಯರುಗಳು ಐದು ದಿನಗಳ ಕಾಲ ನಿರಂತರ ನಿಗಾವಹಿಸಿದ ಬಳಿಕ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಸ್ವಲ್ಪ ದಿನ ಬಿಟ್ಟು ಸ್ಟೆಂಟ್ ಅಳವಡಿಸಲಾಗುವುದು ಎಂದು ಗಂಗುಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವಾಗ ವೈದ್ಯರು ಹೇಳಿದ್ದರು.
Next Story