ಸಾಮಾಜಿಕ ಹೋರಾಟಗಾರ್ತಿ ನೊದೀಪ್ ಕೌರ್ ರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಮೆಟ್ಟಿಲೇರಿದ ಕುಟುಂಬಸ್ಥರು
ಚಂಡಿಗಢ, ಫೆ. 7: ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ್ತಿ ನೊದೀಪ್ ಕೌರ್ ಅವರನ್ನು ಬಿಡುಗಡೆ ಮಾಡುವಂತೆ ಕೋರಿ ಕೌರ್ ಅವರ ಕುಟುಂಬ ಪಂಜಾಬ್ ಹಾಗೂ ಹರ್ಯಾಣ ಉಚ್ಚ ನ್ಯಾಯಾಲಯದ ಮೆಟ್ಟಿಲೇರಲಿದೆ.
ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಂಧಿತರಾಗಿ ಕಳೆದ ಒಂದು ತಿಂಗಳಿಂದ ಜೈಲಿನಲ್ಲಿರುವ ಕೌರ್ ಅವರಿಗೆ ಸೋನಿಪತ್ನ ಸತ್ರ ನ್ಯಾಯಾಲಯ ಬುಧವಾರ ಜಾಮೀನು ನಿರಾಕರಿಸಿತ್ತು. ಮಜ್ದೂರ್ ಅಧಿಕಾರ್ ಸಂಘಟನೆಯ ಸದಸ್ಯೆಯಾಗಿರುವ ಕೌರ್ ಅವರನ್ನು ಜನವರಿ 12ರಂದು ಬಂಧಿಸಲಾಗಿತ್ತು. ಕೃಷಿ ಕಾಯ್ದೆಗಳ ವಿರುದ್ಧ ದಿಲ್ಲಿ ಗಡಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಪಾಲ್ಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಹತ್ಯೆ ಯತ್ನ ಹಾಗೂ ಸುಲಿಗೆ ಪ್ರಕರಣ ದಾಖಲಿಸಲಾಗಿತ್ತು. ಈ ನಡುವೆ ಕೌರ್ ಅವರ ಸಹೋದರಿ ರಾಜ್ವೀರ್, ಪೊಲೀಸ್ ಕಸ್ಟಡಿಯಲ್ಲಿ ಕೌರ್ ಅವರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿದ್ದಾರೆ.
Next Story