ಪಂಜಾಬ್ ನಲ್ಲಿ ಮೊದಲ ಕಿಸಾನ್ ಮಹಾ ಪಂಚಾಯತ್: ಲಕ್ಷಕ್ಕೂ ಅಧಿಕ ರೈತರು ಭಾಗಿ
ಲುಧಿಯಾನ: ಕೇಂದ್ರ ಸರಕಾರದ 3 ಕೃಷಿ ಕಾನೂನುಗಳನ್ನು ವಿರೋಧಿಸಿ ದಿಲ್ಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಹೋರಾಟವು ಈಗ ಸುತ್ತಮುತ್ತಲಿನ ರಾಜ್ಯಗಳಿಗೂ ಹರಡಿದೆ. ಕಿಸಾನ್ ಮಹಾ ಪಂಚಾಯತ್ ನ ಹೆಸರಿನಲ್ಲಿ ನಡೆಯುತ್ತಿರುವ ಬೃಹತ್ ಸಭೆಗಳಿಗೆ ಲಕ್ಷಾಂತರ ರೈತರು ಭಾಗವಹಿಸಿ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ.
ರೈತ ಚಳುವಳಿ ಉತ್ತುಂಗದಲ್ಲಿರುವ ಪಂಜಾಬ್ ನಲ್ಲಿ ಗುರುವಾರ ಮೊದಲ ಕಿಸಾನ್ ಮಹಾ ಪಂಚಾಯತ್ ನಡೆದಿದ್ದು, ಲಕ್ಷಕ್ಕೂ ಅಧಿಕ ಜನರು ಭಾಗವಹಿಸಿ ಮಹಾ ಪಂಚಾಯತ್ ಯಶಸ್ವಿಗೊಳಿಸಿದ್ದಾರೆ.
ಪಂಜಾಬ್ ನ ಲುಧಿಯಾನ ಜಿಲ್ಲೆಯ ಜಾಗ್ರಾವ್ನ್ ಮಾರುಕಟ್ಟೆಯಲ್ಲಿ ಪಂಜಾಬ್ ನ 31 ರೈತ ಸಂಘಟನೆಗಳು ಜಂಟಿಯಾಗಿ ಕಿಸಾನ್ ಮಹಾ ಪಂಚಾಯತ್ ಆಯೋಜಿಸಿದ್ದವು. ಮಾರುಕಟ್ಟೆಯ ಅಂಗಳದ ತುಂಬೆಲ್ಲೆಲ್ಲಾ ರೈತರು ಜಮಾಯಿಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತಾರು ರೈತ ಮುಖಂಡರು ಭಾಗಿಯಾಗಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ಮೇರೆಗೆ ಹೋರಾಟ ತೀವ್ರಗೊಳಿಸಲು ನಿರ್ದರಿಸಿದ್ದಾರೆ.
First kisan mahapanchayat in Punjab today. In Jagraon, Ludhiana. Vid speaks for itself. pic.twitter.com/ndaJ1om1vD
— Krishan Partap Singh (@RaisinaSeries) February 11, 2021