ವಿದ್ಯಾರ್ಥಿಗಳೊಂದಿಗೆ ನೃತ್ಯ, ಪುಶ್ ಅಪ್, ಸಂವಾದ: ತಮಿಳುನಾಡಿನಲ್ಲಿ ಮಿಂಚುತ್ತಿರುವ ರಾಹುಲ್ ಗಾಂಧಿ
ವೀಡಿಯೋ ವೈರಲ್
photo: twitter
ಚೆನ್ನೈ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಮಿಳುನಾಡು ಮತ್ತು ಕೇರಳದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೇರಳದಲ್ಲಿ ಮೀನುಗಾರರೊಂದಿಗೆ ಆಳ ಸಮುದ್ರಕ್ಕಿಳಿದು ಈಜಾಡಿದ್ದ ವೀಡಿಯೋ ಈಗಾಗಲೇ ಸಾಮಾಜಿಕ ತಾಣದಾದ್ಯಂತ ವೈರಲ್ ಆಗಿತ್ತು. ಇದೀಗ ತಮಿಳುನಾಡಿನಲ್ಲಿ ವಿದ್ಯಾರ್ಥಿಗಳೊಂದಿಗೆ ನೃತ್ಯ ಮಾಡಿರುವ ಮತ್ತು ಪುಶ್ ಅಪ್ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ.
ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಯಲಿ ಮಕ್ಕಳೊಂದಿಗೆ ಸಂವಾದದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ ವಿದ್ಯಾರ್ಥಿಗಳ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದರು. ಮಕ್ಕಳೊಂದಿಗೆ ಕೂಡಿಕೊಂಡು ನೃತ್ಯ ಮಾಡಿದರು. ೧೦ ಸೆಕುಂಡುಗಳಲ್ಲಿ ೧೪ ಪುಶ್ ಅಪ್ ಮಾಡುವ ಮೂಲಕ ನೆರೆದಿದ್ದವರನ್ನು ನಿಬ್ಬೆರಗಾಗಿಸಿದರು. ಫಿಟ್ನೆಸ್ ಕುರಿತಾದಂತೆ ವಿದ್ಯಾರ್ಥಿಗಳು ಕೇಳಿದ ಹಲವು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಉತ್ತರಿಸಿದರು.
ಈ ಕಾರ್ಯಕ್ರಮಕ್ಕೂ ಮುಂಚೆ ನಡೆದ ರೋಡ್ ಶೋನಲ್ಲಿ ಸಾವಿರಾರು ಮಂದಿ ನೆರೆದು ರಾಹುಲ್ ಗಾಂಧಿಯನ್ನು ಸ್ವಾಗತಿಸಿದರು.
Congress leader #RahulGandhi takes up push-up challenge from a 10th standard student at a school in Mulagumoodu.
— NDTV (@ndtv) March 1, 2021
Rahul Gandhi is on a three-day visit to Tamil Nadu, ahead of polls on April 6 https://t.co/m5DMhwKVO2 pic.twitter.com/6hiDqGnhDw
Of course @RahulGandhi is super fit! But whether it's swimming with the fishermen or dancing or pushups with young students, it is about connecting with & understanding people through shared activities. pic.twitter.com/0ZU76zCkuY
— Ruchira Chaturvedi (@RuchiraC) March 1, 2021
#WATCH: Congress leader Rahul Gandhi dances with students of St. Joseph's Matriculation Hr. Sec. School in Mulagumoodubn, Tamil Nadu during an interaction with them pic.twitter.com/RaSDpuXTqQ
— ANI (@ANI) March 1, 2021