ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಕೋವಿಡ್-19ನಿಂದಾಗಿ ನಿಧನ
ಹೊಸದಿಲ್ಲಿ: ಬಿಜೆಪಿ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ (69 ವರ್ಷ)ಮಂಗಳವಾರ ಬೆಳಗ್ಗೆ ದಿಲ್ಲಿ-ಎನ್ ಸಿ ಆರ್ ನ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಎ ಎನ್ ಐ ಸುದ್ದಿಸಂಸ್ಥೆ ವರದಿ ಮಾಡಿದೆ.
ಕೋವಿಡ್-19 ಪಾಸಿಟಿವ್ ಆಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ನಂದಕುಮಾರ್ ಸಿಂಗ್ ಚೌಹಾಣ್ ಮಧ್ಯಪ್ರದೇಶದ ಖಾಂಡ್ವಾ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಚೌಹಾಣ್ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ವಿಟರ್ ಮೂಲಕ ಶೋಕ ವ್ಯಕ್ತಪಡಿಸಿದ್ದಾರೆ.
ಖಾಂಡ್ವಾ ಲೋಕಸಭಾ ಸಂಸದ ನಂದಕುಮಾರ್ ಸಿಂಗ್ ಚೌಹಾಣ್ ನಿಧನದಿಂದ ದುಃಖಿತನಾಗಿರುವೆ. ಸಂಸದೀಯ ಪ್ರಕ್ರಿಯೆಗಳು, ಸಂಘಟನಾ ಕೌಶಲ್ಯಗಳು, ಮಧ್ಯಪ್ರದೇಶದಾದ್ಯಂತ ಬಿಜೆಪಿಯನ್ನು ಬಲಗೊಳಿಸಲು ಅವರು ಪಟ್ಟಿರುವ ಪ್ರಯತ್ನದ ಮೂಲಕ ಸದಾ ಕಾಲ ನೆನಪಿನಲ್ಲಿ ಉಳಿಯುತ್ತಾರೆ. ಅವರ ನಿಧನದ ಸುದ್ದಿ ಸಹಿತ ಶಕ್ತಿ ಅವರ ಕುಟುಂಬಕ್ಕೆ ಸಿಗಲಿ ಎಂದು ಪ್ರಧಾನಿ ಮೋದಿ ಟ್ವೀಟಿಸಿದರು.
Next Story