ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ. ಜಾರ್ಜ್ ಮನೆಯ 4ನೇ ಮಹಡಿಯಿಂದ ಬಿದ್ದು ಸಾವು
ಹೊಸದಿಲ್ಲಿ, ಮಾ. 7: ಮುತ್ತೂಟ್ ಸಮೂಹದ ಅಧ್ಯಕ್ಷ ಎಂ.ಜಿ. ಜಾರ್ಜ್ ಮುತ್ತೋಟ್ (71) ಶನಿವಾರ ತನ್ನ ಮನೆಯ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.
ಎಂ.ಜಿ. ಜಾರ್ಜ್ ಮುತ್ತೂಟ್ ಅವರು ಪೂರ್ವ ದಿಲ್ಲಿಯ ಕೈಲಾಸ್ನಲ್ಲಿರುವ ತನ್ನ ಮನೆಯ 4ನೇ ಮಹಡಿಯಿಂದ ಶುಕ್ರವಾರ ರಾತ್ರಿ 9 ಗಂಟೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಫೋರ್ಟಿಸ್ ಎಸ್ಕಾರ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರು ಚಿಕಿತ್ಸೆಯ ವೇಳೆ ಮೃತಪಟ್ಟಿದ್ದಾರೆ.
ಅವರ ಮರಣೋತ್ತರ ಪರೀಕ್ಷೆಯ ವರದಿಯನ್ನು ಏಮ್ಸ್ ನಲ್ಲಿ ನಡೆಸಲಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ಯಾವುದೇ ಸಂಶಯ ಕಂಡು ಬಂದಿಲ್ಲ. ಮುತ್ತೂಟ್ ಫೈನಾನ್ಸ್ ಅನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವಲ್ಲಿ, ದೇಶಾದ್ಯಂತ ಹಾಗೂ ವಿದೇಶಗಳಲ್ಲಿ ಕೂಡ ತನ್ನ ಶಾಖೆಯನ್ನು ವಿಸ್ತರಿಸುವಲ್ಲಿ ಅಧ್ಯಕ್ಷರಾಗಿದ್ದ ಅವರು ಪ್ರಮುಖ ಪಾತ್ರ ವಹಿಸಿದ್ದರು.
Next Story