ಪಂಚ ರಾಜ್ಯಗಳಲ್ಲಿ ಲಸಿಕೆಯ ಪ್ರಮಾಣಪತ್ರದಿಂದ ಪ್ರಧಾನಿ ಫೋಟೊ ತೆರವು
ಚುನಾವಣಾ ಆಯೋಗಕ್ಕೆ ತಿಳಿಸಿದ ಕೇಂದ್ರ ಸರಕಾರ
ಹೊಸದಿಲ್ಲಿ: ಚುನಾವಣೆಗೆ ಸಜ್ಜಾಗಿರುವ ನಾಲ್ಕು ರಾಜ್ಯಗಳಾದ ಕೇರಳ, ಅಸ್ಸಾಂ, ಪಶ್ಚಿಮಬಂಗಾಳ, ತಮಿಳುನಾಡು ಹಾಗೂ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿಯಲ್ಲಿ ಕೊರೋನ ಲಸಿಕೆಯ ಪ್ರಮಾಣಪತ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ತೆಗೆಯಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಚುನಾವಣಾ ಆಯೋಗಕ್ಕೆ ತಿಳಿಸಿದೆ.
ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಅದರಲ್ಲೂ ಪಶ್ಚಿಮಬಂಗಾಳದಲ್ಲಿ ಕೊರೋನ ಲಸಿಕೆಯ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಅವರ ಭಾವಚಿತ್ರ ಬಳಕೆ ಮಾಡುವುದನ್ನು ಆಕ್ಷೇಪಿಸಿ ತೃಣಮೂಲ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದ್ದು, ಪ್ರಧಾನಿ ಫೋಟೊವನ್ನು ಪ್ರಮಾಣಪತ್ರದಿಂದ ತೆಗೆದುಹಾಕುವಂತೆ ಮನವಿ ಮಾಡಿತ್ತು.
Next Story