ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೆ ಹಾರೈಸಿ ಟ್ವೀಟ್ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಹೊಸದಿಲ್ಲಿ: ಚೀನಾದ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ ಎರಡೇ ದಿನಗಳಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಕೋವಿಡ್ ಪರೀಕ್ಷೆ ವರದಿಯಲ್ಲಿ ಪಾಸಿಟಿವ್ ಆಗಿತ್ತು. ಈ ಕುರಿತಾದಂತೆ ಪಾಕಿಸ್ತಾನದ ಆರೋಗ್ಯ ಸಚಿವರು ಟ್ವೀಟ್ ಮೂಲಕ ಅಧಿಕೃತ ಹೇಳಿಕೆ ನೀಡಿದ್ದರು. ಇದೀಗ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಚೇತರಿಕೆಗೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಹಾರೈಕೆ ವ್ಯಕ್ತಪಡಿಸಿದ್ದಾರೆ.
"ಕೋವಿಡ್ ೧೯ನಿಂದ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬೇಗ ಚೇತರಿಸಿಕೊಳ್ಳಲು ಹಾರೈಸುತ್ತೇನೆ" ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಗೆ ಪಾಕಿಸ್ತಾನಿ ನಾಗರಿಕರು ಸೇರಿದಂತೆ ಹಲವಾರು ಮಂದಿ ಪ್ರತಿಕ್ರಿಯಿಸಿದ್ದಾರೆ.
Best wishes to Prime Minister @ImranKhanPTI for a speedy recovery from COVID-19.
— Narendra Modi (@narendramodi) March 20, 2021
Next Story