ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ 8 ನೇ ಕಂತನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ
20 ಸಾವಿರ ಕೋ.ರೂ.ಗೂ ಅಧಿಕ ಮೊತ್ತ, 9.5 ಕೋಟಿ ರೈತರು ಫಲಾನುಭವಿಗಳು
ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 8 ನೇ ಕಂತಿನ 20,000 ಕೋಟಿ ರೂ.ಗೂ ಅಧಿಕ ಮೊತ್ತವನ್ನು 9.5 ಕೋಟಿಗೂ ಹೆಚ್ಚು ರೈತ ಫಲಾನುಭವಿಗಳಿಗೆ ಬಿಡುಗಡೆ ಮಾಡಿದ್ದಾರೆ. ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮೂಲಕ ಶುಕ್ರವಾರ ವೀಡಿಯೋ-ಕಾನ್ಫರೆನ್ಸಿಂಗ್ ಮೂಲಕ ಬಿಡುಗಡೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಪ್ರಧಾನಿ 6 ರೈತ-ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಕೂಡ ಈ ವೇಳೆ ಉಪಸ್ಥಿತರಿದ್ದರು. ಪಶ್ಚಿಮ ಬಂಗಾಳವು ಇಂದು ಈ ಯೋಜನೆಗೆ ಸೇರ್ಪಡೆಗೊಂಡಿದ್ದು, ರಾಜ್ಯದ 7 ಲಕ್ಷಕ್ಕೂ ಹೆಚ್ಚು ರೈತರು ಇಂದು ಇದರ ಲಾಭ ಪಡೆಯುತ್ತಿದ್ದಾರೆ ಎಂದು ತೋಮರ್ ಹೇಳಿದರು.
ಪಿಎಂ-ಕಿಸಾನ್ ಯೋಜನೆಯಡಿ, ವಾರ್ಷಿಕವಾಗಿ 14 ಕೋಟಿ ಅರ್ಹ ಫಲಾನುಭವಿ ರೈತ ಕುಟುಂಬಗಳಿಗೆ ವರ್ಷಕ್ಕೆ 6000 ರೂ.ಗಳ ಆರ್ಥಿಕ ಲಾಭವನ್ನು ನೀಡಲಾಗುತ್ತದೆ.
ನಿಧಿಯನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ. ಈ ಸಂದರ್ಭದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ಮೇಘಾಲಯ, ಜಮ್ಮು- ಕಾಶ್ಮೀರ ಮತ್ತು ಅಂಡಮಾನ್ ಮತ್ತು ನಿಕೋಬಾರ್ನ ರಾಜ್ಯಗಳ 6 ರೈತರೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.