ಐಎಸ್ ಸಿ ಬೋರ್ಡ್ ಪರೀಕ್ಷೆ ರದ್ದುಪಡಿಸಿದ ಸಿಐಎಸ್ ಸಿಇ
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಕೋವಿಡ್ -19 ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಈ ವರ್ಷದ 12 ನೇ ತರಗತಿ ಐಎಸ್ ಸಿ ಬೋರ್ಡ್ ಪರೀಕ್ಷೆಗಳನ್ನು ರದ್ದುಪಡಿಸಲು ಸಿಐಎಸ್ ಸಿಇ ಮಂಗಳವಾರ ನಿರ್ಧರಿಸಿದೆ ಎಂದು ಅದರ ಕಾರ್ಯದರ್ಶಿ ಗೆರ್ರಿ ಅರಾಥೂನ್ ತಿಳಿಸಿದ್ದಾರೆ.
"ಪರೀಕ್ಷೆಗಳನ್ನು ರದ್ದುಪಡಿಸಲಾಗಿದೆ. ಪರ್ಯಾಯ ಮೌಲ್ಯಮಾಪನ ಮಾನದಂಡಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು" ಎಂದು ಅರಾಥೂನ್ PTI ಗೆ ತಿಳಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಿಬಿಎಸ್ಇ ಮಂಡಳಿಯ ಪರೀಕ್ಷೆಗಳನ್ನು ರದ್ದುಗೊಳಿಸಿದ ಬೆನ್ನಿಗೇ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ ಸಿಇ) ಈ ನಿರ್ಧಾರಕ್ಕೆ ಬಂದಿದೆ.
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರಲ್ಲಿನ ಆತಂಕವನ್ನು ಕೊನೆಗೊಳಿಸಬೇಕು ಎಂದು ಪ್ರಧಾನಿ ಪ್ರತಿಪಾದಿಸಿದರು.
Next Story