ಇದುವರೆಗೆ ಅರ್ಧದಷ್ಟು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಸಂಪೂರ್ಣ ಲಸಿಕೆ: ವರದಿ | Vartha Bharati- ವಾರ್ತಾ ಭಾರತಿ

--

ಇದುವರೆಗೆ ಅರ್ಧದಷ್ಟು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಸಂಪೂರ್ಣ ಲಸಿಕೆ: ವರದಿ

photo: The New Indian Express

ಹೊಸದಿಲ್ಲಿ: ಜನವರಿ ಮಧ್ಯದಲ್ಲಿ ರಾಷ್ಟ್ರವ್ಯಾಪಿ ಲಸಿಕೆ ನೀಡಿದೆ ಅಭಿಯಾನ ಆರಂಭವಾದ ಸುಮಾರು ಐದು ತಿಂಗಳ ನಂತರ ಭಾರತದಲ್ಲಿ ಶೇಕಡಾ 60 ಕ್ಕಿಂತಲೂ ಕಡಿಮೆ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ವಿರುದ್ಧ ಸಂಪೂರ್ಣವಾಗಿ ಲಸಿಕೆ ನೀಡಲಾಗಿದೆ ಎಂದು The New Indian Express ವರದಿ ಮಾಡಿದೆ.

ದೇಶದಲ್ಲಿ ಆರೋಗ್ಯ ಕಾರ್ಯಕರ್ತರ ಸಂಖ್ಯೆ ಸುಮಾರು 1 ಕೋಟಿ ಹಾಗೂ  ಅವರು ಸಾಂಕ್ರಾಮಿಕ ಕಾಯಿಲೆಗೆ ಹೆಚ್ಚು ಗುರಿಯಾಗುತ್ತಾರೆ ಎಂದು ಪರಿಗಣಿಸಲಾಗಿದೆ.

ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಕುರಿತು  ನಡೆಸಿರುವ ಪರಿಶೀಲನಾ ಸಭೆಯಲ್ಲಿ ಈ ವರ್ಗದವರಲ್ಲಿ ಮೊದಲ ಡೋಸ್ ಪಡೆದವರ ರಾಷ್ಟ್ರೀಯ ಸರಾಸರಿ ಶೇ. 82 ರಷ್ಟಿದ್ದರೆ, ಎರಡನೇ ಡೋಸ್‌ಗೆ ಇದು ಕೇವಲ 56ಶೇ. ಮಾತ್ರ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ಒತ್ತಿ ಹೇಳಿದೆ.

ಆತಂಕಕಾರಿ ಸಂಗತಿಯೆಂದರೆ ಪಂಜಾಬ್, ಮಹಾರಾಷ್ಟ್ರ, ಹರಿಯಾಣ, ತಮಿಳುನಾಡು, ದಿಲ್ಲಿ ಹಾಗೂ  ಅಸ್ಸಾಂ ಸೇರಿದಂತೆ 18 ರಾಜ್ಯಗಳು ಹಾಗೂ  ಕೇಂದ್ರಾಡಳಿತ ಪ್ರದೇಶಗಳಲ್ಲಿನ ಆರೋಗ್ಯ ಕಾರ್ಯಕರ್ತರಲ್ಲಿ ಸಂಪೂರ್ಣ ವ್ಯಾಕ್ಸಿನೇಷನ್ ವ್ಯಾಪ್ತಿಯು ರಾಷ್ಟ್ರೀಯ ಸರಾಸರಿಗಿಂತಲೂ ಕಡಿಮೆಯಾಗಿದೆ.

ಈ ನಿರ್ಣಾಯಕ ವಿಭಾಗದಲ್ಲಿ ಕಡಿಮೆ ಪೂರ್ಣ ವ್ಯಾಕ್ಸಿನೇಷನ್ ಹೊರತಾಗಿಯೂ ದೇಶದ 2 ಕೋಟಿ ಮುಂಚೂಣಿ ಕಾರ್ಯಕರ್ತರ ಪೈಕಿ ಸುಮಾರು ಅರ್ಧದಷ್ಟು ಮಂದಿ ಲಸಿಕೆಯ ಎರಡು ಸಂಪೂರ್ಣ ಡೋಸ್ ಗಳನ್ನು ಸ್ವೀಕರಿಸಿದ್ದಾರೆ.

ಆರೋಗ್ಯ ಹಾಗೂ ಮುಂಚೂಣಿ ಕಾರ್ಯಕರ್ತರೆಂಬ ಎರಡು ಆದ್ಯತೆಯ ಗುಂಪುಗಳಿಗೆ ಕಡಿಮೆ ಪ್ರಮಾಣದ ವ್ಯಾಕ್ಸಿನೇಷನ್  "ಗಂಭೀರ ಕಳವಳಕಾರಿ"ಯಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್  ಹೇಳಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top