ಗುಜರಾತ್ ಚುನಾವಣೆ: ಎಲ್ಲ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧೆ
ಅಹಮದಾಬಾದ್: ಮುಂಬರುವ 2022ರ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ( ಎಎಪಿ)ಎಲ್ಲ 182 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ. ಕಾಂಗ್ರೆಸ್, ಬಿಜೆಪಿಗೆ ಪರ್ಯಾಯ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
ಇಲ್ಲಿ ಸೋಮವಾರ ಪಕ್ಷದ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಕೇಜ್ರಿವಾಲ್, ಗುಜರಾತ್ ನಲ್ಲಿರುವ ಆಡಳಿತ ಪಕ್ಷ ಬಿಜೆಪಿ ಹಾಗೂ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಗಿಂತ ಆಮ್ ಆದ್ಮಿ ಪಕ್ಷ ಹೆಚ್ಚು ವಿಶ್ವಾಸಾರ್ಹ ಪಕ್ಷವಾಗಿದೆ ಎಂದರು.
Next Story