ಕೇಂದ್ರ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವೀಯ, ಅಮಿತ್ ಶಾಗೆ ನೂತನ ಸಹಕಾರ ಖಾತೆ ಹೊಣೆ
ಹೊಸದಿಲ್ಲಿ: ಇಂದು ಪ್ರಧಾನಿ ನರೇಂದ್ರ ಮೋದಿಯವರ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದ್ದು, ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತಿದೆ. ಒಟ್ಟು 43 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ನೂತನ ಆರೋಗ್ಯ ಸಚಿವರಾಗಿ ಮನ್ಸುಖ್ ಮಾಂಡವೀಯರನ್ನು ನೇಮಕ ಮಾಡಲಾಗಿದೆ.
ಕೇಂದ್ರ ಸಹಕಾರ ಖಾತೆಯನ್ನು ತಮ್ಮ ಗೃಹ ಖಾತೆಯೊಂದಿಗೆ ಅಮಿತ್ ಶಾ ವಹಿಸಿಕೊಂಡಿದ್ದಾರೆ. ಸ್ಮೃತಿ ಇರಾನಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
Next Story