ಉತ್ತರಾಖಂಡ:ಅರ್ಚಕರು, ಇತರ ಸದಸ್ಯರೊಂದಿಗೆ ಅನುಚಿತ ವರ್ತನೆ ಆರೋಪ, ಬಿಜೆಪಿ ಸಂಸದನ ವಿರುದ್ಧ ಪ್ರಕರಣ | Vartha Bharati- ವಾರ್ತಾ ಭಾರತಿ

--

ಉತ್ತರಾಖಂಡ:ಅರ್ಚಕರು, ಇತರ ಸದಸ್ಯರೊಂದಿಗೆ ಅನುಚಿತ ವರ್ತನೆ ಆರೋಪ, ಬಿಜೆಪಿ ಸಂಸದನ ವಿರುದ್ಧ ಪ್ರಕರಣ

photo: twitter

 ಡೆಹ್ರಾಡೂನ್: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರೆವೆನ್ಯೂ ಪೊಲೀಸರು ಉತ್ತರಪ್ರದೇಶದ ಅಒನ್ಲಾದ ಬಿಜೆಪಿ ಸಂಸದ ಧರ್ಮೇಂದ್ರ ಕಶ್ಯಪ್ ಹಾಗೂ  ಇತರ ಮೂವರ ವಿರುದ್ಧ ಜಗೇಶ್ವರ ಧಾಮದ ಅರ್ಚಕರು ಹಾಗೂ  ದೇವಾಲಯದ ನಿರ್ವಹಣಾ ಸಮಿತಿಯ ಸದಸ್ಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜುಲೈ 31 ರಂದು ಈ ಘಟನೆ ನಡೆದಿದೆ. ದೇವಾಲಯ ಸಮಿತಿಯ ದೂರಿನ ಮೇರೆಗೆ ಸಂಸದ, ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕಂದಾಯ ಸಬ್ ಇನ್ಸ್‌ಪೆಕ್ಟರ್ ಗೋಪಾಲ್ ಸಿಂಗ್ ಬಿಶ್ತ್  ಹೇಳಿದ್ದಾರೆ.

ಕಶ್ಯಪ್ ಹಾಗೂ  ಇತರ ಮೂವರು ಮಧ್ಯಾಹ್ನ 3.30 ರ ಸುಮಾರಿಗೆ ದೇವಸ್ಥಾನಕ್ಕೆ ಹೋಗಿದ್ದರು ಹಾಗೂ  ಸಂಜೆ 6 ಗಂಟೆಗೆ ಭಕ್ತರಿಗಾಗಿ ಗೇಟ್‌ಗಳನ್ನು ಮುಚ್ಚಿದರೂ ಸುಮಾರು 6.30 ರವರೆಗೆ ದೇವಾಲಯದ ಒಳಗೆ ಉಳಿದಿದ್ದರು.

"ದೂರಿನ ಪ್ರಕಾರ, ಸಿಬ್ಬಂದಿಯು ದೇವಸ್ಥಾನದಿಂದ ಹೊರಹೋಗುವಂತೆ ಸಂಸದರಿಗೆ ಪದೇ ಪದೇ ವಿನಂತಿಸಿಕೊಂಡರು. ನಾವು  ಸಂಸದರನ್ನು ದೇವಸ್ಥಾನದಿಂದ ಹೊರ ಹೋಗುವಂತೆ ಕೇಳಿದಾಗ ಅವರು ನಮ್ಮೊಂದಿಗೆ ಅನುಚಿತವಾಗಿ ವರ್ತಿಸಿದರು ಮತ್ತು ನಿಂದಿಸಿದರು ಎಂದು ಅರ್ಚಕರು ಹಾಗೂ  ದೇವಸ್ಥಾನ ಸಮಿತಿಯ ಸದಸ್ಯರು ಆರೋಪಿಸಿದ್ದಾರೆ.

ಕಶ್ಯಪ್ ಹಾಗೂ  ಇತರ ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ  188 (ಸಾರ್ವಜನಿಕ ಸೇವಕರು ಸರಿಯಾಗಿ ಘೋಷಿಸಿದ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಬಿಶ್ತ್ ಹೇಳಿದರು.

ಈ ಘಟನೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ರಾಜ್ಯ ಅಧ್ಯಕ್ಷ ಗಣೇಶ್ ಗೋಡಿಯಾಲ್ ಅವರು ಕಶ್ಯಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ  ಅವರ ಲೋಕಸಭಾ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಬಿಜೆಪಿ ಕೇಂದ್ರ ನಾಯಕತ್ವಕ್ಕೆ ಕೇಳಿಕೊಂಡರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top