ಕೋವಿಡ್ ಸೋಂಕಿನ ಪ್ರಕರಣ ಇಳಿಕೆ: ಕೇಂದ್ರ
ಹೊಸದಿಲ್ಲಿ, ಸೆ. 17 : ಕೇರಳ ಸೇರಿದಂತೆ ಭಾರತದಾದ್ಯಂತ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಆದರೆ, ಮಿಝೋರಾಂನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಕಳವಳ ಉಂಟು ಮಾಡಿದೆ ಎಂದು ನೀತಿ ಆಯೋಗದ ಸದಸ್ಯ (ಆರೋಗ್ಯ) ವಿ.ಕೆ. ಪೌಲ್ ಅವರು ಹೇಳಿದ್ದಾರೆ.
‘‘ಮುಂದಿನ ಮೂರ್ನಾಲ್ಕು ತಿಂಗಳು ಕೋವಿಡ್ ಪ್ರಕರಣಗಳ ಏರಿಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಜಾಗರೂಕತೆಯಿಂದ ಇರುವಂತೆ ನಾವು ಮನವಿ ಮಾಡುತ್ತಿದ್ದೇವೆ. ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಸ್ಥಿರವಾಗಿರುವುದು ನಮಗೆ ಸಂತಸ ಉಂಟು ಮಾಡಿದೆ’’ ಎಂದು ಅವರು ಹೇಳಿದ್ದಾರೆ.
Next Story