78 ಕೋಟಿಗೂ ಅಧಿಕ ಕೋವಿಡ್ ಲಸಿಕೆ ಡೋಸ್ ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ: ಕೇಂದ್ರ
ಹೊಸದಿಲ್ಲಿ, ಸೆ. 18: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 78 ಕೋಟಿಗೂ ಅಧಿಕ ಕೋವಿಡ್ ಲಸಿಕೆಯ ಡೋಸ್ ಗಳನ್ನು ರವಾನಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ತಿಳಿಸಿದೆ.
ಇದಲ್ಲದೆ, 33 ಲಕ್ಷಕ್ಕೂ ಅಧಿಕ ಡೋಸ್ ಗಳನ್ನು ಪೂರೈಸಲು ಈಗಾಗಲೇ ಯೋಜಿಸಲಾಗಿದೆ. ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 6.02 ಕೋಟಿಗೂ ಅಧಿಕ ಬಳಕೆಯಾಗದೆ ಕೋವಿಡ್ ಲಸಿಕೆಯ ಡೋಸ್ ಗಳು ಬಾಕಿ ಉಳಿದಿವೆ ಎಂದು ಸಚಿವಾಲಯ ತಿಳಿಸಿದೆ. ರಾಷ್ಟ್ರವ್ಯಾಪಿ ಲಸಿಕೀಕರಣದ ಒಂದು ಭಾಗವಾಗಿ ಕೋವಿಡ್ ಲಸಿಕೆಗಳನ್ನು ಉಚಿತವಾಗಿ ಪೂರೈಸಲು ಕೇಂದ್ರ ಸರಕಾರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಬೆಂಬಲ ನೀಡುತ್ತಿದೆ ಎಂದು ಸಚಿವಾಲಯ ತಿಳಿಸಿದೆ.
Next Story