ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು
ಹೊಸದಿಲ್ಲಿ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಮಂಗಳವಾರ ರಾಜಿನಾಮೆ ನೀಡಿದ್ದಾರೆ.
"ರಾಜಿಯಾಗುವ ಮೂಲಕ ಮನುಷ್ಯ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲು ಆರಂಭಿಸುತ್ತಾನೆ. ಪಂಜಾಬ್ ನ ಭವಿಷ್ಯ ಮತ್ತು ಕಲ್ಯಾಣದ ವಿಚಾರದಲ್ಲಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ. ಆದ್ದರಿಂದ ನಾನು ಈ ಮೂಲಕ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಕಾಂಗ್ರೆಸ್ ನಲ್ಲಿ ನನ್ನ ಸೇವೆ ಮುಂದುವರಿಸುತ್ತೇನೆ" ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.
— Navjot Singh Sidhu (@sherryontopp) September 28, 2021
Next Story