ಜಮ್ಮು-ಕಾಶ್ಮೀರ:ಶವವಾಗಿ ಪತ್ತೆಯಾದ ಸಿಆರ್ಪಿಎಫ್ ಯೋಧ
ಬನಿಹಾಲ್/ಜಮ್ಮು: ಜಮ್ಮು ಹಾಗೂ ಕಾಶ್ಮೀರದ ರಂಬಾನ್ ಜಿಲ್ಲೆಯಲ್ಲಿ ಸಿಆರ್ಪಿಎಫ್ ಯೋಧನ ಮೃತದೇಹ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕಾನ್ಸ್ಟೇಬಲ್ ರಾಜೀವ್ ರಂಜನ್ ಅವರು ಜಿಲ್ಲೆಯ ಬೂಮ್ ಚಂದರಕೂಟ್ ಪ್ರದೇಶದ 84 ನೇ ಬೆಟಾಲಿಯನ್ ಶಿಬಿರದಲ್ಲಿ ಬೆಳಿಗ್ಗೆ 8.40 ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮೂಲಗಳ ಪ್ರಕಾರ ಬಿಹಾರದ ಛಾಪ್ರಾ ಜಿಲ್ಲೆಯವರಾಗಿದ್ದ ರಂಜನ್ ತನ್ನ ಸರ್ವೀಸ್ ರೈಫಲ್ ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪೊಲೀಸರು ವಿಚಾರಣೆಯನ್ನು ಆರಂಭಿಸಿದ್ದಾರೆ ಎಂದು ಅವರು ಹೇಳಿದರು.
Next Story