ಏಮ್ಸ್ ನಿಂದ ಬಿಡುಗಡೆಯಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಹೊಸದಿಲ್ಲಿ: ದಿಲ್ಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ನಿಂದ (ಏಮ್ಸ್) ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಚಿಕಿತ್ಸೆ ನಂತರ ರವಿವಾರ ಡಿಸ್ಚಾರ್ಜ್ ಆಗಿದ್ದಾರೆ.
ಡಾ.ಸಿಂಗ್ ಅವರು ದಿಲ್ಲಿಯ ಏಮ್ಸ್ ನಿಂದ ಸಂಜೆ 5:20 ಕ್ಕೆ ಡಿಸ್ಚಾರ್ಜ್ ಆದರು. ಅಕ್ಟೋಬರ್ 13 ರಂದು ಅವರನ್ನು ಏಮ್ಸ್ಗೆ ದಾಖಲಿಸಲಾಯಿತು ಹಾಗೂ ಅಂದಿನಿಂದ ವೈದ್ಯರ ಮೇಲ್ವಿಚಾರಣೆಯಲ್ಲಿದ್ದರು.
ಅವರು ನಿಶ್ಶಕ್ತಿಯ ಸಮಸ್ಯೆ ಎದುರಿಸುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ತಿಂಗಳ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಸಿಂಗ್ ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದರು.
Next Story