ಬಿಟ್ ಕಾಯಿನ್ ಹಗರಣ ದೊಡ್ಡದು, ಅದನ್ನು ಮುಚ್ಚಿಹಾಕುವುದು ಅದಕ್ಕಿಂತ ದೊಡ್ಡ ಹಗರಣ: ರಾಹುಲ್ ಗಾಂಧಿ
ಹೊಸದಿಲ್ಲಿ: ಬಿಟ್ ಕಾಯಿನ್ ಹಗರಣ ದೊಡ್ಡದು. ಆದರೆ ಅದನ್ನು ಮುಚ್ಚಿಹಾಕುವುದು ಅದಕ್ಕಿಂತ ದೊಡ್ಡ ಹಗರಣ. ಏಕೆಂದರೆ ತನಿಖೆಯಲ್ಲಿ ಒಬ್ಬರ ಬೃಹತ್ ನಕಲಿ ಅಹಂ ಅನ್ನು ಕೂಡ ಗಣನೆಗೆ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿರುವ ಬಿಟ್ ಕಾಯಿನ್ ಹಗರಣದ ಕುರಿತು ಇಂದು ಟ್ವೀಟಿಸಿದ್ದಾರೆ.
ಬಿಟ್ ಕಾಯಿನ್ ಹಗರಣದಲ್ಲಿ ಬಿಜೆಪಿ ನಾಯಕರು ಶಾಮೀಲಾಗಿದ್ದು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕೆಂದು ಕಾಂಗ್ರೆಸ್ ಪಕ್ಷ ಆಗ್ರಹಿಸುತ್ತಿದೆ. ಹಗರಣದಲ್ಲಿ ಕಾಂಗ್ರೆಸ್ ನಾಯಕರ ಮಕ್ಕಳು ಇದ್ದಾರೆ ಎಂದು ಬಿಜೆಪಿ ಪ್ರತ್ಯಾರೋಪ ಮಾಡಿದೆ.
Bitcoin Scam is big.
— Rahul Gandhi (@RahulGandhi) November 13, 2021
But Bitcoin Scam Cover-up is much bigger.
Because it has to cover up someone’s fake big ego.
Next Story