ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರಧಾನಿ ಮೋದಿ ನೇತೃತ್ವದಲ್ಲಿ ರವಿವಾರ ಸರ್ವಪಕ್ಷ ಸಭೆ
ಹೊಸದಿಲ್ಲಿ: ಸಂಸತ್ತಿನ ಚಳಿಗಾಲ ಅಧಿವೇಶನದ ಆರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪಾಲ್ಗೊಳ್ಳುವಿಕೆಯಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. ರವಿವಾರ ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ ಎಂದು NDTV ವರದಿ ಮಾಡಿದೆ.
ರವಿವಾರ ಸಂಜೆ ಬಿಜೆಪಿ ಸಂಸದೀಯ ಕಾರ್ಯಕಾರಿಣಿ ಸಭೆ ನಡೆಸಲಿದೆ.
ಪ್ರಧಾನಿ ಮೋದಿ ಅವರು ಶುಕ್ರವಾರದಂದು ದೇಶವನ್ನುದ್ದೇಶಿಸಿ ಮಾತನಾಡುತ್ತಾದೇಶದ ರೈತರ ಭಾರೀ ಪ್ರತಿಭಟನೆಗೆ ಕಾರಣವಾಗಿರುವ ಮೂರು ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಅಧಿವೇಶನವು ಅತ್ಯಂತ ಮಹತ್ವ ಪಡೆದಿದೆ.
Next Story