ಚಳಿಗಾಲದ ಅಧಿವೇಶನ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷ ಸಭೆ
ನರೇಂದ್ರ ಮೋದಿ (PTI)
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ಸರ್ವಪಕ್ಷ ಸಭೆಯನ್ನು ಕರೆಯಲಾಗಿದೆ. ಸಂಸತ್ತಿನ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ.
ಈ ಅಧಿವೇಶನವು ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಕೃಷಿ ಕಾನೂನು ರದ್ದತಿ, ಇಂಧನ ಬೆಲೆ ಏರಿಕೆ, ತನಿಖಾ ಸಂಸ್ಥೆಗಳ ಮುಖ್ಯಸ್ಥರ ಅಧಿಕಾರ ಅವಧಿ ವಿಸ್ತರಣೆ, ಸೇರಿದಂತೆ ಪ್ರಮುಖ ವಿಷಯಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.
ನ.29ರಿಂದ ಅಧಿವೇಶನವು ಪ್ರಾರಂಭವಾಗಲಿದ್ದು, ಡಿ.23ಕ್ಕೆ ಮುಕ್ತಾಯವಾಗಲಿದೆ.
Next Story