ನವಿ ಮುಂಬೈ ಗೋದಾಮಿನಲ್ಲಿ ಅಗ್ನಿ ಆಕಸ್ಮಿಕ: ಕನಿಷ್ಠ 40 ಬಿಎಂಡಬ್ಲ್ಯು ಕಾರುಗಳು ಸುಟ್ಟು ಭಸ್ಮ
ಸಾಂದರ್ಭಿಕ ಚಿತ್ರ
ಥಾಣೆ: ನವಿ ಮುಂಬೈನ ತುರ್ಭೆ ಎಂಐಡಿಸಿ ಪ್ರದೇಶದಲ್ಲಿನ ಶೋರೂಂ ಕಮ್ ಗೋದಾಮಿನಲ್ಲಿ ಸಂಭವಿಸಿದ ಭಾರಿ ಬೆಂಕಿ ಅನಾಹುತದಲ್ಲಿ ಕನಿಷ್ಠ 40 ಬಿಎಂಡಬ್ಲ್ಯು ಕಾರುಗಳು ಸುಟ್ಟು ಭಸ್ಮವಾಗಿವೆ ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ 5.30ರ ಸುಮಾರಿಗೆ ಬಿಎಂಡಬ್ಲ್ಯು ಕಾರುಗಳ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಲಿ ನಿಲ್ಲಿಸಿದ್ದ ಕಾರುಗಳು ಸುಟ್ಟು ಕರಕಲಾಗಿವೆ ಎಂದು ಎಂಐಡಿಸಿ ಅಗ್ನಿಶಾಮಕ ಸೇವೆಗಳ ಮುಖ್ಯ ಅಧಿಕಾರಿ ಆರ್.ಬಿ.ಪಾಟೀಲ್ ತಿಳಿಸಿದ್ದಾರೆ.
ಮಂಗಳವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಹತ್ತು ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿಯನ್ನು ಹತೋಟಿಗೆ ತರಲಾಗಿದೆ. ಕನಿಷ್ಠ 40-45 ಬಿಎಂಡಬ್ಲ್ಯು ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ ಎಂದು ಅವರು ತಿಳಿಸಿದ್ದಾರೆ.
Next Story