--

ಮನೆಗಳಲ್ಲಿಯೇ ಐಸೋಲೇಶನ್ ನಲ್ಲಿರುವವರಿಗೆ ಟೆಲಿಸಮಾಲೋಚನಾ ವ್ಯವಸ್ಥೆ: ರಾಜ್ಯ, ಕೇಂದ್ರಾಡಳಿತಗಳಿಗೆ ಕೇಂದ್ರ ಸೂಚನೆ

ಸಾಂದರ್ಭಿಕ ಚಿತ್ರ:PTI

ಹೊಸದಿಲ್ಲಿ, ಜ.25: ಮನೆಯಲ್ಲಿ ಐಸೋಲೇಶನ್‌ನಲ್ಲಿದ್ದುಕೊಂಡೇ ಚೇತರಿಸಿಕೊಳ್ಳುತ್ತಿರುವ ಕೋವಿಡ್-19 ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಸಕಾಲದಲ್ಲಿ ಆ ರೋಗ್ಯಪಾಲನಾ ಸೇವೆಗಳನ್ನು ಒದಗಿಸಲು ದೂರಸಮಾಲೋಚನಾ (ಟೆಲಿಕನ್ಸಲ್ಟೇಶನ್) ಸೇವೆಗಳನ್ನು ವಿಸ್ತರಿಸುವ ಬಗ್ಗೆ ಗಮನಹರಿಸಬೇಕೆಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ರಾಜ್ಯಗಳಿಗೆ ತಿಳಿಸಿದ್ದಾರೆ.

ಜಮ್ಮುಕಾಶ್ಮೀರ, ಹಿಮಾಚಲಪ್ರದೇಶ, ಪಂಜಾಬ್,ಚಂಡೀಗಢ, ಉತ್ತರಾಖಂಡ, ಹರ್ಯಾಣ, ದಿಲ್ಲಿ, ಲಡಾಖ್ ಹಾಗೂ ಉತ್ತರಪ್ರದೇಶ ಸೇರಿದಂತೆ 9 ರಾಜ್ಯಗಳು ಹಾಗೂ ಕೇಂದ್ರಾಡಳಿತಗಳ ಆರೋಗ್ಯ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ವಿಡಿಯೋಕಾನ್ಫರೆನ್ಸ್ ಸಭೆ ನಡೆಸಿ ಸಂದರ್ಭದಲ್ಲಿ ಈ ಸಲಹೆೆ ನೀಡಿದ್ದಾರೆಂದು ಆರೋಗ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.

ಹೆಚ್ಚುವರಿ ಟೆಲಿಕಮ್ಯೂನಿಕೇಶನ್ ಕೇಂದ್ರಗಳನ್ನು ತೆರೆಯುವಂತೆಯೂ ಮಾಂಡವೀಯ ಅವರು ರಾಜ್ಯಗಳು ಹಾಗೂ ಕೇಂದ್ರಾಡಳಿತಗಳನ್ನು ಆಗ್ರಹಿಸಿದ್ದಾರೆ. ಇದರಿಂದಾಗಿ ಸೋಂಕಿತರಿಗೆ ಜಿಲ್ಲಾ ಕೇಂದ್ರಗಳಲ್ಲಿ ನಿಯೋಜಿತರಾಗಿರುವ ತಜ್ಞರ ಸಲಹೆಯನ್ನು ಪಡೆದುಕೊಳ್ಳಲು ಸುಲಭವಾಗಲಿದೆ ಎಂದು ವರದಿ ಹೇಳಿದೆ.

ಕೇಂದ್ರ ಸರಕಾರದ ಇ-ಸಂಜೀವಿನಿ ಟೆಲಿಮೆಡಿಸಿನ್ ವ್ಯವಸ್ಥೆಯು ಮೂಲಕ ಜನರು ತಮ್ಮ ತಮ್ಮ ಮನೆಗಳಲ್ಲಿದ್ದುಕೊಂಡೇ ವೈದ್ಯಕೀಯ ಸಲಹೆಯನ್ನು ಪಡೆಯಬಹುದಾಗಿದ್ದು, ಈವರೆಗೆ 2.6 ಕೋಟಿಗೂ ಅಧಿಕ ಮಂದಿ ಫಲಾನುಭವಿಗಳಿಗೆ ಸೇವೆಯನ್ನು ಒದಗಿಸಿದೆ ಎಂದವರು ಹೇಳಿದರು.

"ಟೆಲಿಕನ್ಸಲ್ಟೇಶನ್ ವ್ಯವಸ್ಥೆಯು ವಿಶೇಷವಾಗಿ ಪ್ರಸಕ್ತ ಚಳಿಗಾಲದಲ್ಲಿ ಉತ್ತರ ಭಾರತದಲ್ಲಿನ ದುರ್ಗಮ ಪ್ರದೇಶಗಳಿಗೆ ಅಗಾಧವಾದ ಪ್ರಾಮುಖ್ಯತೆಯನ್ನು ಪಡೆಯಲಿದೆ" ಎಂದು ಮಾಂಡವೀಯ ಗಮನಸೆಳೆದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top