ನಿರ್ಮಾಣ ಹಂತದ ಸುರಂಗದಲ್ಲಿ ಸಿಲುಕಿಕೊಂಡ 7 ಕಾರ್ಮಿಕರ ರಕ್ಷಣೆ, ಇನ್ನೂ ಇಬ್ಬರಿಗಾಗಿ ಶೋಧ
Photo: Twitter
ಭೋಪಾಲ್: ಮಧ್ಯಪ್ರದೇಶದ ಕಟ್ನಿ ಜಿಲ್ಲೆಯ ಸ್ಲೀಮನಾಬಾದ್ನಲ್ಲಿ ಬಾರ್ಗಿ ಕಾಲುವೆ ಯೋಜನೆಯ ನಿರ್ಮಾಣ ಹಂತದ ಸುರಂಗದಲ್ಲಿ ಒಂಬತ್ತು ಕಾರ್ಮಿಕರು ಸಿಕ್ಕಿಬಿದ್ದಿದ್ದು. ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಒಂಬತ್ತು ಕಾರ್ಮಿಕರಲ್ಲಿ ಏಳು ಮಂದಿಯನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಜ್ಯ ವಿಪತ್ತು ತುರ್ತು ನಿರ್ವಹಣಾ ಪಡೆ (ಎಸ್ ಡಿಇಆರ್ ಎಫ್) ತಂಡದೊಂದಿಗೆ ಸ್ಥಳೀಯ ಅಧಿಕಾರಿಗಳು ಉಳಿದ ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ.
ಎಸ್ಡಿಇಆರ್ಎಫ್ ತಂಡ ಜಬಲ್ಪುರದಿಂದ ಆಗಮಿಸಿದೆ ಎಂದು ಕಟ್ನಿ ಕಲೆಕ್ಟರ್ ಪ್ರಿಯಾಂಕ್ ಮಿಶ್ರಾ ತಿಳಿಸಿದ್ದಾರೆ.
ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ.
ಮಧ್ಯಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೇಶ್ ರಾಜೋರಾ ಅವರು ರಾಜ್ಯ ಸಚಿವಾಲಯದಿಂದ ರಕ್ಷಣಾ ಕಾರ್ಯಾಚರಣೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.
"ಅಗತ್ಯ ಸಾಧನಗಳೊಂದಿಗೆ ಎಸ್ಡಿಇಆರ್ಎಫ್ ತಂಡವು ಕಾರ್ಮಿಕರನ್ನು ತಲುಪಲು ಪ್ರಯತ್ನಿಸುತ್ತಿದೆ. ರಕ್ಷಣಾ ಕಾರ್ಯಾಚರಣೆಯ ಮೇಲ್ವಿಚಾರಣೆಗಾಗಿ ಜಿಲ್ಲಾಧಿಕಾರಿ ಮತ್ತು ಎಸ್ಪಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ" ಎಂದು ರಾಜೋರಾ ಪಿಟಿಐಗೆ ತಿಳಿಸಿದರು.
"ಸಿಕ್ಕಿಬಿದ್ದ ಕಾರ್ಮಿಕರು ರಕ್ಷಣಾ ಸಿಬ್ಬಂದಿಯ ಕರೆಗಳಿಗೆ ಸ್ಪಂದಿಸುತ್ತಿದ್ದಾರೆ''ಎಂದು ಸ್ಲೀಮನಾಬಾದ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಸಂಘ ಮಿತ್ರ ಗೌತಮ್ ಹೇಳಿದ್ದಾರೆ.
#WATCH | Of the 9 labourers trapped, 5 have been rescued after an under-construction tunnel of the Bargi underground canal caved in at Sleemanabad in Katni district of Madhya Pradesh; 4 yet to be rescued. SDERF team at the spot: Administration pic.twitter.com/O0vLdYZj8B
— ANI (@ANI) February 12, 2022