ಅಸ್ಸಾಂ ಸಿಎಂ ಹಿಮಂತ ಬಿಸ್ವಾ ವಿರುದ್ಧ ಹೈದರಾಬಾದ್ ನಲ್ಲಿ ಪ್ರಕರಣ ದಾಖಲು
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ
ಹೈದರಾಬಾದ್ (ತೆಲಂಗಾಣ): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಿಪಿಸಿಸಿ ಅಧ್ಯಕ್ಷ ರೇವಂತ್ ರೆಡ್ಡಿ ನೀಡಿದ ದೂರಿನ ಮೇರೆಗೆ ಹೈದರಾಬಾದ್ ನಗರದ ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸೋಮವಾರ ಮುಂಜಾನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸಭ್ಯ ಹೇಳಿಕೆ ನೀಡಿದ್ದ ಅಸ್ಸಾಂ ಮುಖ್ಯಮಂತ್ರಿ ವಿರುದ್ಧ ಟಿಪಿಸಿಸಿ ಅಧ್ಯಕ್ಷರು ಜುಬಿಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹಿಮಂತ ಬಿಸ್ವಾ ಶರ್ಮಾ ವಿರುದ್ಧ ಕಾಂಗ್ರೆಸ್ ನಾಯಕರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದು, ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
Next Story