ಕೀವ್ ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು: ಕೇಂದ್ರ ಸಚಿವ ವಿಕೆ ಸಿಂಗ್ ಮಾಹಿತಿ
ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಯುದ್ಧಪೀಡಿತ ಉಕ್ರೇನ್ ನ ಕೀವ್ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡೇಟು ತಗುಲಿ ಗಾಯಗೊಂಡಿರುವ ಬಗ್ಗೆ ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಸಚಿವ ವಿಕೆ ಸಿಂಗ್, ಉಕ್ರೇನ್ ನ ರಾಜಧಾನಿ ಕೀವ್ ನಿಂದ ಬರುತ್ತಿದ್ದ ಭಾರತೀಯ ವಿದ್ಯಾರ್ಥಿಯೋರ್ವನಿಗೆ ಗುಂಡೇಟು ತಗುಲಿ ಗಾಯಗೊಂಡಿದ್ದು, ವಿದ್ಯಾರ್ಥಿ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅವರು ಹೇಳಿದ್ದಾರೆ.
ಗಾಯಗೊಂಡಿರುವ ವಿದ್ಯಾರ್ಥಿ ಕೀವ್ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.
I received info today that a student coming from Kyiv got shot and was taken back midway. We're trying for maximum evacuation in minimum loss: MoS Civil Aviation Gen (Retd) VK Singh, in Poland#RussiaUkraine pic.twitter.com/cggVEsqfEj
— ANI (@ANI) March 4, 2022
Next Story