ಅಮೇಠಿ: ಹೋಲಿ ಆಚರಿಸುವ ಕುರಿತು ನಡೆದ ಘರ್ಷಣೆಯಲ್ಲಿ ಇಬ್ಬರು ಸಾವು, 6 ಮಂದಿಗೆ ಗಾಯ
ಅಮೇಠಿ, ಮಾ. 18: ಇಲ್ಲಿನ ಗ್ರಾಮವೊಂದರಲ್ಲಿ ಶುಕ್ರವಾರ ಹೋಳಿ ಹಬ್ಬ ಆಚರಿಸುವ ಕುರಿತಂತೆ ನಡೆದ ಘರ್ಷಣೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ 6 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತಪಟ್ಟವರನ್ನು ಅಖಂಡ ಪ್ರತಾಪ್ ಸಿಂಗ್ (32) ಹಾಗೂ ಶಿವರಾಮ್ ಪಾಸಿ (55) ಎಂದು ಗುರುತಿಸಲಾಗಿದೆ. ಜಮೊ ಪೊಲೀಸ್ ಠಾಣಾ ವ್ಯಾಪ್ತಿಯ ರೇವ್ರಹಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಉಸ್ತುವಾರಿ ಪೊಲೀಸ್ ಅಧಿಕಾರಿ ಧಿರೇಂದ್ರ ಕುಮಾರ್ ಯಾದವ್ ಅವರು ಹೇಳಿದ್ದಾರೆ. ಘರ್ಷಣೆಯ ಹಿನ್ನೆಲೆಯಲ್ಲಿ ಜಿಲ್ಲಾ ದಂಡಾಧಿಕಾರಿ ರಾಕೇಶ್ ಕುಮಾರ್ ಮಿಶ್ರಾ ಹಾಗೂ ಪೊಲೀಸ್ ಅಧೀಕ್ಷಕ ದಿನೇಶ್ ಗ್ರಾಮ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಸ್ತುತ ಈ ಪ್ರದೇಶದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಅಖಂಡ ಪ್ರತಾಪ್ ಸಿಂಗ್ ಈ ಹಿಂದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಧಿರೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.
Next Story