ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ರಾಹುಲ್ ಗಾಂಧಿ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿದ ತೆಲಂಗಾಣ ಹೈಕೋರ್ಟ್
ಹೈದರಾಬಾದ್: ಟಾಗೋರ್ ಸಭಾಂಗಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿ ಯುವಕರ ನಡುವೆ ಮುಖಾಮುಖಿ ಸಂವಾದಕ್ಕೆ ಅವಕಾಶ ನೀಡುವಂತೆ ಉಪಕುಲಪತಿಗಳಿಗೆ ನಿರ್ದೇಶನ ನೀಡುವಂತೆ ಕೋರಿ ಉಸ್ಮಾನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ. ಮೇ 7 ರಂದು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಸಂವಾದ ನಿಗದಿಯಾಗಿದೆ. ಅರ್ಜಿಯನ್ನು ಆಲಿಸಿದ ಹೈಕೋರ್ಟ್ , ವಿಶ್ವವಿದ್ಯಾನಿಲಯ ಕ್ಯಾಂಪಸ್ ಅನ್ನು ರಾಜಕೀಯ ವೇದಿಕೆಯಾಗಿ ಬಳಸಲಾಗುವುದಿಲ್ಲ. ರಾಜಕೀಯ ಕಾರ್ಯಕ್ರಮಗಳಿಗೆ ಅನುಮತಿ ನೀಡುವುದು ವಿಶ್ವವಿದ್ಯಾನಿಲಯದ ಕಾರ್ಯಕಾರಿ ಮಂಡಳಿಯ 1591ಎಚ್ ಸಭೆಯ ನಿರ್ಣಯ ಸಂಖ್ಯೆ 6 ರ ಉಲ್ಲಂಘನೆಯಾಗಿದೆ" ಎಂದು ಹೇಳಿದೆ.
Next Story