ಮಾಜಿ ಕಾಂಗ್ರೆಸ್ ನಾಯಕ ಸುನೀಲ್ ಜಾಖರ್ ಬಿಜೆಪಿಗೆ ಸೇರ್ಪಡೆ
Photo:ANI
ಹೊಸದಿಲ್ಲಿ: ಕೆಲವು ದಿನಗಳ ಹಿಂದೆ ಕಾಂಗ್ರೆಸ್ ಪಕ್ಷವನ್ನು ತೊರೆದಿರುವ ಪಂಜಾಬ್ ಕಾಂಗ್ರೆಸ್ ಘಟಕದ ಮಾಜಿ ಮುಖ್ಯಸ್ಥ ಸುನೀಲ್ ಜಾಖರ್ ಗುರುವಾರ ದಿಲ್ಲಿಯಲ್ಲಿ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದ್ದಾರೆ.
ಹಿರಿಯ ನಾಯಕ ಜಾಖರ್ ಶನಿವಾರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು.
ಪಂಜಾಬ್ ಘಟಕದ ಕೆಲವು ನಾಯಕರು ನನ್ನ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ ಆರೋಪ ಮಾಡಿದ ನಂತರ ಕಾಂಗ್ರೆಸ್ ಶಿಸ್ತು ಸಮಿತಿಯು ಪಕ್ಷದ ಎಲ್ಲಾ ಹುದ್ದೆಗಳಿಂದ ನನ್ನನ್ನು ತೆಗೆದುಹಾಕಿದಾಗ ನಾನು ಎದೆಗುಂದಿದೆ ಎಂದು ಮೂರು ಬಾರಿ ಶಾಸಕರಾಗಿ ಮತ್ತು ಒಂದು ಬಾರಿ ಸಂಸದರಾಗಿದ್ದ ಜಾಖರ್ ಹೇಳಿದ್ದಾರೆ.
Next Story