ಸೋನಿಯಾ ಗಾಂಧಿ ದಿಲ್ಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲು
Photo: PTI
ಹೊಸದಿಲ್ಲಿ: ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ದಿಲ್ಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪಕ್ಷ ರವಿವಾರ ಪ್ರಕಟಿಸಿದೆ. ಸೋನಿಯಾ ಅವರ ಆರೋಗ್ಯ ಸ್ಥಿರವಾಗಿದೆ ಹಾಗೂ ಅವರು ನಿಗಾದಲ್ಲಿದ್ದಾರೆ ಎಂದು ಪಕ್ಷ ತಿಳಿಸಿದೆ.
"ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾ ಗಾಂಧಿ ಅವರು ಕೋವಿಡ್ ಸಂಬಂಧಿತ ಸಮಸ್ಯೆಗಳಿಂದಾಗಿ ರವಿವಾರ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಸ್ಥಿರವಾಗಿದ್ದಾರೆ ಹಾಗೂ ನಿಗಾವಹಿಸಲು ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗುವುದು. ನಾವು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕಾರ್ಯಕರ್ತೆಯರಿಗೆ ಮತ್ತು ಎಲ್ಲಾ ಹಿತೈಷಿಗಳಿಗೆ ಅವರ ಕಾಳಜಿ ಹಾಗೂ ಶುಭ ಹಾರೈಕೆಗಾಗಿ ಧನ್ಯವಾದಗಳು " ಎಂದು ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಸೋನಿಯಾ ಗಾಂಧಿಯವರು ಜೂನ್ 2 ರಂದು ಕೊರೋನವೈರಸ್ ಸೋಂಕಿಗೆ ಒಳಗಾಗಿದ್ದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ಈಡಿ) ಹೆಚ್ಚಿನ ಸಮಯ ಕೋರಿದ್ದರು.