ಮೋದಿಜಿ 19 ವರ್ಷಗಳ ಕಾಲ ಸುಳ್ಳು ಆರೋಪ ಸಹಿಸಿಕೊಂಡರು: ಅಮಿತ್ ಶಾ
Photo:PTI
ಹೊಸದಿಲ್ಲಿ, ಜೂ.25: ಕಾನೂನು ಪ್ರಕ್ರಿಯೆ ನಡೆಯುತ್ತಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿಜಿ 2002ರ ಗುಜರಾತ್ ಗಲಭೆಗೆ ಸಂಬಂಧಿಸಿದ ಸುಳ್ಳು ಆರೋಪಗಳನ್ನು 19 ವರ್ಷಗಳ ಕಾಲ ಮೌನವಾಗಿ ಸಹಿಸಿಕೊಂಡಿದ್ದಾರೆ. ಯಾರೂ ಕೂಡ ಈ ಕುರಿತು ಧರಣಿ ಮಾಡಲಿಲ್ಲ ಎಂದು ಸುದ್ದಿಸಂಸ್ಥೆ ANI ಗೆ ನೀಡಿದ ಸಂದರ್ಶನವೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ.
ಗುಜರಾತ್ ಗಲಭೆಗೆ ಸಂಬಂಧಿಸಿ ಸುಪ್ರೀಂಕೋರ್ಟ್ ಶುಕ್ರವಾರ ನರೇಂದ್ರ ಮೋದಿಗೆ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಶಾ ಈ ಹೇಳಿಕೆ ನೀಡಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಪಕ್ಷದ ಹಿರಿಯ ನಾಯಕ ರಾಹುಲ್ ಗಾಂಧಿಯ ವಿಚಾರಣೆಯನ್ನು ಖಂಡಿಸಿ ದಿನಗಟ್ಟಲೆ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ ನಡೆಸಿದರು.
Next Story