ಉಪಚುನಾವಣೆ: ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಸಂಗ್ರೂರ್ ಲೋಕಸಭಾ ಕ್ಷೇತ್ರದಲ್ಲಿ ಆಪ್ ಗೆ ಸೋಲು
ಭಗವಂತ್ ಮಾನ್ (PTI)
ಹೊಸದಿಲ್ಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಂದ ತೆರವಾದ ಸಂಗ್ರೂರ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಶಿರೋಮಣಿ ಅಕಾಲಿದಳ(ಅಮೃತಸರ) ನಾಯಕ ಸಿಮ್ರಾನ್ ಜಿತ್ ಸಿಂಗ್ ಮಾನ್ 7,052 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಆಡಳಿತಾರೂಢ ಆಮ್ ಆದ್ಮಿ ಪಕ್ಷ ಭಾರೀ ಹಿನ್ನಡೆ ಅನುಭವಿಸಿದೆ.
ಈಗ ರಾಜ್ಯದ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ ಅವರು 2014 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ ಸಂಗ್ರೂರ್ ಕ್ಷೇತ್ರವನ್ನು ಗೆದ್ದಿದ್ದರು.
77 ವರ್ಷದ ಸಿಮ್ರಾನ್ ಜಿತ್ ಸಿಂಗ್ ಮಾನ್ ಅವರು ಮಾಜಿ ಸಂಸದರಾಗಿದ್ದು, ಶಿರೋಮಣಿ ಅಕಾಲಿದಳದ (ಅಮೃತಸರ) ಅಧ್ಯಕ್ಷರಾಗಿದ್ದಾರೆ .
ಕಾಂಗ್ರೆಸ್ ಅಭ್ಯರ್ಥಿ ದಲ್ವೀರ್ ಸಿಂಗ್ ಗೋಲ್ಡಿ, ಬಿಜೆಪಿಯ ಕೇವಲ್ ಧಿಲ್ಲೋನ್ ಹಾಗೂ ಅಕಾಲಿದಳದ ಕಮಲದೀಪ್ ಕೌರ್ ರಾಜೋನಾ ಕ್ರಮವಾಗಿ ಮೂರು, ನಾಲ್ಕು ಹಾಗೂ ಐದನೇ ಸ್ಥಾನದಲ್ಲಿದ್ದಾರೆ.
Next Story