ನವಾಬ್ ಮಲಿಕ್, ಅನಿಲ್ ದೇಶ್ಮುಖ್ಗೆ ವಿಶ್ವಾಸ ಮತಯಾಚನೆಯಲ್ಲಿ ಭಾಗವಹಿಸಲು ಅವಕಾಶ ನೀಡಿದ ಸುಪ್ರೀಂ
ಮುಂಬೈ: ಜೈಲಿನಲ್ಲಿರುವ ಮಹಾರಾಷ್ಟ್ರ ಶಾಸಕರಾದ ನವಾಬ್ ಮಲಿಕ್ ಮತ್ತು ಅನಿಲ್ ದೇಶಮುಖ್ ಅವರು ನಾಳೆಯ ವಿಶ್ವಾಸ ಮತಯಾಚನೆ ವೇಳೆ ಮತ ಚಲಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.
ಪ್ರತ್ಯೇಕ ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಜಾರಿ ನಿರ್ದೇಶನಾಲಯದಿಂದ ಮಲಿಕ್ ಮತ್ತು ದೇಶಮುಖ್ ಬಂಧಿತರಾಗಿದ್ದಾರೆ.
ರಾಜ್ಯಪಾಲರ ಆದೇಶದಂತೆ ಗುರುವಾರ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಯಾಚನೆ ನಡೆಯಲಿದೆ.
ಮತಯಾಚನೆ ನಡೆಸುವಂತೆ ರಾಜ್ಯಪಾಲರು ನೀಡಿದ್ದ ಆದೇಶವನ್ನು ಉದ್ಧವ್ ಠಾಕ್ರೆ ಸುಪ್ರೀಂ ಕೋರ್ಟಿನಲ್ಲಿ ಪ್ರಶ್ನಿಸಿತ್ತು. ಆದರೆ, ರಾಜ್ಯಪಾಲರ ಆದೇಶದ ಪರವಾಗಿ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್ ಠಾಕ್ರೆ ಮನವಿಯನ್ನು ನಿರಾಕರಿಸಿದೆ.
Next Story