--

ನಾವು ಹಿಂದೂಗಳಲ್ಲದೇ, ಇನ್ನಿತರ ಶೋಷಿತ ಸಮುದಾಯಗಳನ್ನೂ ತಲುಪಬೇಕು: ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ, ಜು.2:   ಹಿಂದೂಯೇತರ ಸಮುದಾಯಗಳಲ್ಲಿರುವ ಶೋಷಿತ ಹಾಗೂ ದಮನಿತರನ್ನ ಪಕ್ಷವು ತಲುಪಬೇಕಾಗಿದೆಯೆಂದು ಪ್ರಧಾನಿ ನರೇಂದ್ರ ಮೋದಿ ರವಿವಾರ ಕರೆ ನೀಡಿದ್ದಾರೆ

ಹೈದರಾಬಾದ್‌ನಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ  ಅವರು ಮಾತನಾಡುತ್ತಿದ್ದರು. ಹಿಂದೂಗಳಲ್ಲಿ ಮಾತ್ರವಲ್ಲದೆ ಇತರ ಸಮುದಾಯಗಳಲ್ಲಿಯೂ ಅವಕಾಶವಂಚಿತ ಹಾಗೂ ದಮನಿತ ವರ್ಗಗಳಿವೆ. ನಾವು ಹಿಂದೂಗಳಿಗೆ ಮಾತ್ರವೇ ಸೀಮಿತವಾಗಿರಕೂಡದು. ಇತರ ಅವಕಾಶವಂಚಿತ ಸಮುದಾಯಗಳಿಗಾಗಿಯೂ ನಾವು ಕೆಲಸ ಮಾಡಬೇಕಾಗಿದೆ ಎಂದವರು  ಸ್ವಪಕ್ಷೀಯರಿಗೆ ಕರೆ ನೀಡಿದರು.

ಉತ್ತರಪ್ರದೇಶದ ಅಝಂಗಢ ಹಾಗೂ ರಾಮಪುರದಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ಒಂದು ವಾರದ ಬಳಿಕ ಮೋದಿ ಈ ಅಭಿಪ್ರಾಯ ವ್ಯಕ್ತಪಡಿಸಿರುವುದು ಗಮನಾರ್ಹವಾಗಿದೆ. ಈ ಎರಡು ಕ್ಷೇತ್ರಗಳಲ್ಲಿ ಮುಸ್ಲಿಂ ಸಮುದಾಯದ ಮತಗಳು ನಿರ್ಣಾಯಕವಾಗಿವೆ. ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದಿರುವ ಪಾಸ್‌ಮಂಡಾ ಮುಸ್ಲಿಮರಂತಹ ವರ್ಗಗಳನ್ನು ಪಕ್ಷವು ತಲುಪಬೇಕೆಂಬುದೇ ಪ್ರಧಾನಿಯ ಸಂದೇಶವಾಗಿದೆಯೆಂದು ಬಿಜೆಪಿಯ ಮೂಲಗಳು ತಿಳಿಸಿವೆ.

‘‘ಈ ಹಿಂದೆಯೂ ಬಿಜೆಪಿಯು ಪಾಸ್‌ಮಂಡಾ ಮುಸ್ಲಿಂ ಸಮುದಾಯವನ್ನು ತಲುಪುವ ಪ್ರಯತ್ನಗಳನ್ನು ಮಾಡಿತ್ತು ಹಾಗೂ ಇತ್ತೀಚೆಗೆ ನಡೆದ ಉಪಚುನಾವಣೆಗಳಲ್ಲಿ ಈ ಸಮುದಾಯದ ಮತಗಳು ಬಿಜೆಪಿಯನ್ನು ಬೆಂಬಲಿಸಿದ್ದವು’’ ಎಂದು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್ ಸರಕಾರವು ಮರಳಿ ಅಧಿಕಾರಕ್ಕೇರಿದ ಬಳಿಕ ಪಾಸ್‌ಮಂಡಾ ಮುಸ್ಲಿಂ ಸಮುದಾಯದ ನಾಯಕ ದಾನಿಶ್ ಆಝಾದ್ ಅವರನ್ನು ಸಂಪುಟಕ್ಕೆ ಸೇರ್ಪಡೆಗೊಳಿಸಿತ್ತು.
ತನ್ನ ಗಣನೀಯ ಉಪಸ್ಥಿತಿಯಿಲ್ಲದ ಹಾಗೂ ಚುನಾವಣಾ ಲಾಭಗಳನ್ನು ಪಡೆಯಲು ಸಾಧ್ಯವಾಗದ ಪ್ರದೇಶಗಳಲ್ಲಿ ತನ್ನ ಪ್ರಾಬಲ್ಯವನ್ನು ಬೆಳೆಸಲು ಬಿಜೆಪಿ ಬಯಸುತ್ತಿದ್ದು, ಈ ಹಿನ್ನೆಲೆಯಲ್ಲಿ ಮೋದಿಯವರ ಈ ಹೇಳಿಕೆ ಹೆಚ್ಚಿನ ಮಹತ್ವವನ್ನು ಪಡೆದಿದೆ.

ಹಿಂದೂಗಳಲ್ಲದೆ ಇತರ ಸಮುದಾಯಗಳ ಬಳಿಗೂ ತಲುಪುವಂತೆ ಹಾಗೂ ಅವರ ಹೃದಯಗಳನ್ನು ಗೆಲ್ಲುವಂತೆಯೂ ಮೋದಿ ಬಿಜೆಪಿಯ ಪ್ರಧಾನ ಕಾರ್ಯದರ್ಶಿಗಳನ್ನು ಆಗ್ರಹಿಸಿದ್ದಾರೆ. ಚುನಾವಣೆಯಲ್ಲಿ ಗಣನೀಯವಾದ ಪ್ರಗತಿಯನ್ನು ಸಾಧಿಸಲು ಪಕ್ಷವು ವಿಫಲವಾಗಿರುವ ರಾಜ್ಯವಾದ ಕೇರಳದಲ್ಲಿ ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯವನ್ನು ತನ್ನೆಡೆಗೆ ಸೆಳೆದುಕೊಳ್ಳಲು ಬಿಜೆಪಿ ಯತ್ನಿಸಬೇಕೆಂದು ಮೋದಿ ಸಮಾವೇಶದಲ್ಲಿ ಸೂಚನೆ ನೀಡಿದ್ದಾರೆನ್ನಲಾಗಿದೆ.

ಸಮಾವೇಶದಲ್ಲಿ ಪ್ರಧಾನಿಯವರು ಈಶಾನ್ಯ ಭಾರತದ ಅಭಿವೃದ್ಧಿಯ ಕುರಿತೂ ಹಲವಾರು ಸಲಹೆ ಸೂಚನೆಗಳನ್ನು ನೀಡಿದ್ದಾರೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. ಎನ್‌ಡಿಎ ಮೈತ್ರಿಕೂಟದ ಅಧ್ಯಕ್ಷೀಯ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಸರಳತೆ ಹಾಗೂ ಬಡತನದ ಹಿನ್ನೆಲೆಯ ಬಗ್ಗೆಯೂ ಬಿಜೆಪಿ ಕಾರ್ಯಕರ್ತರು ಜನತೆಗೆ ಸಂದೇಶವನ್ನು ತಲುಪಿಸಬೇಕೆಂದು ಮೋದಿ ಕರೆ ನೀಡಿದರೆಂದು ಅವರು ಹೇಳಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top