Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಸಮರ್ಥವಾಗಿ ಕಾರ್ಯನಿರ್ವಹಿಸಿ ಇಲ್ಲವೇ...

'ಸಮರ್ಥವಾಗಿ ಕಾರ್ಯನಿರ್ವಹಿಸಿ ಇಲ್ಲವೇ ಮನೆಗೆ ತೆರಳಲು ಸಿದ್ಧರಾಗಿ': BSNL ಉದ್ಯೋಗಿಗಳಿಗೆ ಸಚಿವರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ6 Aug 2022 2:59 PM IST
share
ಸಮರ್ಥವಾಗಿ ಕಾರ್ಯನಿರ್ವಹಿಸಿ ಇಲ್ಲವೇ ಮನೆಗೆ ತೆರಳಲು ಸಿದ್ಧರಾಗಿ: BSNL ಉದ್ಯೋಗಿಗಳಿಗೆ ಸಚಿವರ ಎಚ್ಚರಿಕೆ

ಹೊಸದಿಲ್ಲಿ: ನಿರೀಕ್ಷಿತ ಕಾರ್ಯನಿರ್ವಹಣೆ ತೋರದ ಬಿಎಸ್ಸೆನ್ನೆಲ್(BSNL) ಉದ್ಯೋಗಿಗಳನ್ನು ಕಡ್ಡಾಯವಾಗಿ ನಿವೃತ್ತಿಗೊಳಿಸಲಾಗುವುದು ಎಂದು ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ (ASHWINI VAISHNAV) ಎಚ್ಚರಿಕೆ ನೀಡಿದ್ದಾರೆ.

ಬಿಎಸ್ಸೆನ್ನೆಲ್‍ನ ಹಿರಿಯ ಅಧಿಕಾರಿಗಳ ಜೊತೆಗೆ ನಡೆದ ಸಭೆಯ ವೇಳೆ ಸಚಿವರ ಮೇಲಿನ ಎಚ್ಚರಿಕೆ ಬಂದಿದೆ. "ನಿಮ್ಮಿಂದ ನಿರೀಕ್ಷಿಸಿದಂತೆ ನೀವು ಕಾರ್ಯನಿರ್ವಹಿಸಬೇಕು, ಇಲ್ಲದೇ ಇದ್ದರೆ ನೀವು ಮನೆಗೆ ತೆರಳಬೇಕು. ಇದು ಹೊಸ ನಿಯಮ, ಸರಿಯಾಗಿ ಕಾರ್ಯನಿರ್ವಹಿಸಿ, ಕೆಲಸ ಮಾಡದ ಜನರು ವಿಆರ್‌ಎಸ್ (VRS) ತೆಗೆದುಕೊಂಡು ಮನೆಗೆ ಹೋಗಬಹುದು. ಆದರೆ ವಿಆರ್‌ಎಸ್ ಗೆ ವಿರೋಧಿಸಿದರೆ ನಾವು 56ಜೆ ನಿಯಮ (ಶೀಘ್ರ ನಿವೃತ್ತಿ ಆದೇಶಿಸುವ ನಿಯಮ) ಬಳಸಲಾಗುವುದು.ನಿಮ್ಮ ಅತ್ಯುತ್ತಮ ಕಾರ್ಯನಿರ್ವಹಣೆ ತೋರಿ ಇಲ್ಲದೇ ಹೋದಲ್ಲಿ ಮನೆಗೆ ತೆರಳಲು ಸಿದ್ಧವಾಗಿ, ಇದು ಸ್ಪಷ್ಟ, ಯಾವುದೇ ಸಂಶಯ ಬೇಡ ,''ಎಂದು ಸಚಿವರು ಹೇಳಿದ್ದಾರೆಂದು ಮಾಧ್ಯಮವೊಂದು ವರದಿ ಮಾಡಿದೆ.

ಖಾಸಗಿ ಟೆಲಿಕಾಂ ಸಂಸ್ಥೆಗಳಿಂದ ಇರುವ ಸ್ಫರ್ಧೆಯನ್ನು ಎದುರಿಸಲು ಉದ್ಯೋಗಿಗಳು ಸ್ಪರ್ಧಾತ್ಮಕ ಮನೋಭಾವ ಹೊಂದಿರಬೇಕು ಎಂದೂ ಸಚಿವರು ಹೇಳಿದರು.

ಇದನ್ನೂ ಓದಿ: ವಿರೋಧದ ಬಳಿಕ ವೆಬ್‌ಸೈಟ್‌ ನಲ್ಲಿ ಹಿಂದಿ ಭಾಷೆ ಅಳಿಸಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ 

ಸರಿಯಾಗಿ ಕರ್ತವ್ಯ ನಿರ್ವಹಿಸದೇ ಇರುವುದರ ಹೊರತಾಗಿ ಕಚೇರಿಗಳನ್ನು ಸ್ವಚ್ಛವಾಗಿ ಸಿಬ್ಬಂದಿ ಇರಿಸುತ್ತಿಲ್ಲ ಎಂದು ಸಚಿವರು ಹೇಳಿದರಲ್ಲದೆ ಝರ್ಸುಗದ್ದ ಇಲ್ಲಿನ ಬಿಎಸ್ಸೆನ್ನೆಲ್ ಎಕ್ಸ್ ಚೇಂಜ್ ಅನ್ನು ಉಲ್ಲೇಖಿಸಿ, ಅಲ್ಲಿನ ಕೊಳಕು ವಾತಾವರಣ ನೋಡಿ ನನಗೆ ನಾಚಿಕೆಯಾಯಿತು ಎಂದರು. ಈ ರೀತಿ ಅಸಮರ್ಪಕ ನಿರ್ವಹಣೆ ಸಹಿಸಲಾಗದು. ಇಂತಹ ಸ್ಥಿತಿಯಿದ್ದರೆ ಹಿರಿಯ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಲಾಗುವುದು ಎಂದರು.

ಬಿಎಸ್ಸೆನ್ನೆಲ್ ಅನ್ನು ಆರ್ಥಿಕ ಸಂಕಷ್ಟದಿಂದ ಹೊರತರಲು ದೊಡ್ಡ ಕ್ರಮ ಕೈಗೊಂಡ ನಂತರ ಇದೀಗ ಅದರ ಸಿಬ್ಬಂದಿಯ ಕಾರ್ಯನಿರ್ವಹಣೆಯನ್ನು ಮಾಸಿಕ ಪರಿಶೀಲಿಸುವುದಾಗಿ ಹೇಳಿದ ಅವರು ಏನೇ ಸಮಸ್ಯೆಯಿದ್ದರೂ ನಾವು ಬಿಎಸ್ಸೆನ್ನೆಲ್ ಪರ ನಿಂತೆವು. ಈಗ ಅದೇ ಬದ್ಧತೆಯನ್ನು  62000 ಸಿಬ್ಬಂದಿಗಳಲ್ಲಿ ಪ್ರತಿಯೊಬ್ಬರಿಂದ ನಿರೀಕ್ಷಿಸುತ್ತೇವೆ,''ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X