ಹೈದರಾಬಾದ್: ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಬಿಜೆಪಿ ಮುಖಂಡ
ಹೈದರಾಬಾದ್ (ತೆಲಂಗಾಣ): ಭಾರತೀಯ ಜನತಾ ಪಕ್ಷದ ನಾಯಕ ಜ್ಞಾನೇಂದ್ರ ಪ್ರಸಾದ್ ಅವರ ನಿವಾಸದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ತಲುಪಿದಾಗ ಪ್ರಸಾದ್ ಫ್ಯಾನ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಮಿಯಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಸೋಮವಾರ ಬೆಳಗ್ಗೆ ಮಿಯಾಪುರ ಪೊಲೀಸರಿಗೆ ಮಾಹಿತಿ ಲಭಿಸಿದಾಗ ಘಟನೆ ಬೆಳಕಿಗೆ ಬಂದಿದೆ.
"ತಕ್ಷಣವೇ ಒಂದು ತಂಡವನ್ನು ಸ್ಥಳಕ್ಕೆ ಕಳುಹಿಸಲಾಯಿತು ಮತ್ತು ಪೊಲೀಸರಿಗೆ ಒಬ್ಬ ವ್ಯಕ್ತಿ ತನ್ನ ನಿವಾಸದಲ್ಲಿ ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಅವರ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಅವರು ಕಳೆದ ಕೆಲವು ದಿನಗಳಿಂದ ತಮ್ಮ ಪೆಂಟ್ಹೌಸ್ನಲ್ಲಿ ತಂಗಿದ್ದರು" ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ (ಪಿಎಂಇ) ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸಿಆರ್ಪಿಸಿ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ಕುರಿತಾದಂತೆ ಹೆಚ್ಚಿನ ತನಿಖೆಗಳು ನಡೆಯುತ್ತಿವೆ.