Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚಹಾ ಎಲೆ ಕೀಳಿ ಮಕ್ಕಳನ್ನು ಪೋಷಿಸಿದ...

ಚಹಾ ಎಲೆ ಕೀಳಿ ಮಕ್ಕಳನ್ನು ಪೋಷಿಸಿದ ತಾಯಿಯ ಮೂವರು ಮಕ್ಕಳಿಗೆ ಡಾಕ್ಟರೇಟ್

ವಾರ್ತಾಭಾರತಿವಾರ್ತಾಭಾರತಿ9 Aug 2022 5:10 PM IST
share
ಚಹಾ ಎಲೆ ಕೀಳಿ ಮಕ್ಕಳನ್ನು ಪೋಷಿಸಿದ ತಾಯಿಯ ಮೂವರು ಮಕ್ಕಳಿಗೆ ಡಾಕ್ಟರೇಟ್

ವಯನಾಡು: ಚಹಾ ತೋಪಿನಲ್ಲಿ ಚಹಾ ಎಲೆ ಕೀಳಿ ಮಕ್ಕಳನ್ನು ಪೋಷಿಸಿದ ಅಮ್ಮನಿಗೆ ಮೂವರು ಮಕ್ಕಳು ಮೂರು 'ಡಾಕ್ಟರೇಟು' ನ ಉಡುಗೊರೆಯನ್ನು ನೀಡಿದ್ದಾರೆ. ವಯನಾಡಿನ ಖದೀಜಾ ಕುಟ್ಟಿ ಅವರ ಮೂರು ಮಕ್ಕಳಾದ ನಜ್ಮುದ್ದೀನ್, ಸಿರಾಜುದ್ದೀನ್, ಶಿಹಾಬುದ್ದೀನ್ ವಿವಿಧ ವಿಷಯದಲ್ಲಿ ಡಾಕ್ಟರೇಟ್‌ ಪದವಿಯನ್ನು ಪಡೆದು ತಾಯಿಯನ್ನು ಧನ್ಯರನ್ನಾಗಿಸಿದ್ದಾರೆ. 

ಖದೀಜಾ ಕುಟ್ಟಿಯ ಪತಿ ಮುಹಮ್ಮದ್ ಮುಸ್ಲಿಯಾರ್ ನಿಧನರಾದಾಗ ಖದೀಜಾ ಅವರಿಗೆ 28 ವರ್ಷ. 6 ಮಕ್ಕಳೊಂದಿಗೆ ಸೋರುವ 3 ಕೋಣೆಗಳ ಎಸ್ಟೇಟ್‌ನಲ್ಲಿ ಜೀವನ. ತನ್ನ ಮಕ್ಕಳನ್ನು ಚೆನ್ನಾಗಿ ಓದಿಸಬೇಕು ಎಂಬ ಗಂಡನ ಆಸೆಯನ್ನು ಪೂರೈಸಲು ಚಹಾ ಎಲೆ ಕೀಳುವ ಕೆಲಸಕ್ಕೆ ಹೋಗಲು ಶುರು ಮಾಡಿಕೊಂಡರು. ಅದರ ಮೂಲಕ ಅಲ್ಪ ಪ್ರಮಾಣದ ಆದಾಯವನ್ನಷ್ಟೇ ಅವರಿಗೆ ಗಳಿಸಲು ಸಾಧ್ಯವಾಗುತ್ತಿತ್ತು. ವಯನಾಡ್ ಮುಸ್ಲಿಂ ಅನಾಥಾಲಯವೊಂದು ಮಕ್ಕಳ ಶಿಕ್ಷಣವನ್ನು ವಹಿಸಿಕೊಂಡಿತು. ಕುಟುಂಬದ ಇತರ ಸದಸ್ಯರೂ ಸಹಾಯಕ್ಕೆ ಬಂದರು. 4 ಮಕ್ಕಳನ್ನು ಅನಾಥಾಶ್ರಮಕ್ಕೆ ಸೇರಿಸಲಾಯಿತು. ಹಿರಿಯ ಮಗ ಅಬೂಬಕರ್ ಸಿದ್ದೀಕ್ ತಾಯಿಯ ಕಷ್ಟ ನೋಡಿ ಪದವಿಪೂರ್ವದಲ್ಲೇ ತಮ್ಮ ಅಧ್ಯಯನವನ್ನು ಮುಗಿಸಿದರು. ಉಮ್ಮಾ ಮತ್ತು ಅವರ ಒಡಹುಟ್ಟಿದವರನ್ನು ಪೋಷಿಸಲು ವಿದೇಶದಲ್ಲಿ ಕೆಲಸಕ್ಕೆ ಹೋದರು.

ಎರಡನೇ ಮಗ ನಜ್ಮುದ್ದೀನ್ ಕುಟುಂಬದಲ್ಲಿ ಮೊದಲ ಡಾಕ್ಟರೇಟ್ ಪಡೆದ ವ್ಯಕ್ತಿ. ಅರೇಬಿಕ್‌ನಲ್ಲಿ ಪಿಎಚ್‌ಡಿ ಪಡೆದಿರುವ ನಜ್ಮುದ್ದೀನ್ ಪ್ರಸ್ತುತ ಡಬ್ಲ್ಯುಎಂಒ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಅರೇಬಿಕ್ ವಿಭಾಗದ ಮುಖ್ಯಸ್ಥರಾಗಿದ್ದಾರೆ. ಎರಡನೇ ಡಾಕ್ಟರೇಟ್ ಹೊಂದಿರುವ ಶಿಹಾಬುದ್ದೀನ್ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರದಲ್ಲಿ ಪಿಎಚ್‌ಡಿ ಪಡೆದಿದ್ದಾರೆ. ದಿಂಡಿಗಲ್‌ನ ಗಾಂಧಿಗ್ರಾಮ ವಿಶ್ವವಿದ್ಯಾಲಯದಿಂದ ರಸಾಯನಶಾಸ್ತ್ರದಲ್ಲಿ ಪಿಎಚ್‌ಡಿ ಪದವಿ ಪಡೆದಿರುವ ಸಿರಾಜುದ್ದೀನ್ ಪಿಹೆಚ್‌ಡಿ ಪದವಿ ಪಡೆದ ಖದೀಜಾ ಕುಟ್ಟಿಯ ಮಕ್ಕಳಲ್ಲಿ ಮೂರನೆಯವರು. ಪ್ರಸ್ತುತ ಅವರು ತಿರುರಂಗಡಿಯ ಪಿಎಸ್‌ಎಂಒ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ. ಇನ್ನೊಬ್ಬ ಪುತ್ರರನಾದ ಅಬ್ದುಲ್ ಮನಾಫ್ ಎಸ್ಟೇಟ್ ಗಳಲ್ಲಿ ಕೆಲಸ ಮಾಡುತ್ತಿದ್ದರೆ, ರಿಯಾಸುದ್ದೀನ್ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X