ಮುಕೇಶ್ ಅಂಬಾನಿಗೆ ಬೆದರಿಕೆ ಕರೆ: ಆರೋಪಿಯ ಬಂಧನ
ಮುಖೇಶ್ ಅಂಬಾನಿ (Photo: PTI)
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ಅಧ್ಯಕ್ಷ ಮುಖೇಶ್ ಅಂಬಾನಿ (Reliance Industries Ltd (RIL) chairman Mukesh Ambani) ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನ್ನು ಮುಂಬೈ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಫ್ಝಲ್ ಎಂದು ಗುರುತಿಸಲಾದ ವ್ಯಕ್ತಿ ಮುಂಬೈನ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬೆದರಿಕೆ ಕರೆಗಳನ್ನು ಮಾಡಿದ್ದಾನೆ ಎಂದು ಅವರು ಹೇಳಿದರು.
"ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಹಾಗೂ ಅವರ ಕುಟುಂಬಕ್ಕೆ ಬೆದರಿಕೆ ಕರೆಗಳ (threat calls) ಬಗ್ಗೆ ರಿಲಯನ್ಸ್ ಫೌಂಡೇಶನ್ ದೂರು ದಾಖಲಿಸಿದೆ. ಆಸ್ಪತ್ರೆಗೆ ಮೂರಕ್ಕೂ ಹೆಚ್ಚು ಕರೆಗಳು ಬಂದಿವೆ. ತನಿಖೆ ನಡೆಯುತ್ತಿದೆ’’ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
Next Story