ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ನಿಗದಿ
ಹೊಸದಿಲ್ಲಿ: ಹಲವಾರು ಹಿರಿಯ ನಾಯಕರು ಕಾಂಗ್ರೆಸ್(Congress) ಪಕ್ಷವನ್ನು ತೊರೆಯುತ್ತಿದ್ದು, ಈ ನಡುವೆ ಇದೀಗ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಾಗಿದೆ ಎಂದು ANI ವರದಿ ಮಾಡಿದೆ.
ವರದಿ ಪ್ರಕಾರ, ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಮತ ಎಣಿಕೆಯು ಅಕ್ಟೋಬರ್ 19ಕ್ಕೆ ನಡೆಯಲಿದೆ ಎಂದು ತಿಳಿದು ಬಂದಿದೆ. ಇಂದು ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
Next Story