ಹಿಜಾಬ್ ನಿಷೇಧ: ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
Photo:PTI
ಹೊಸದಿಲ್ಲಿ: ರಾಜ್ಯದ ಕೆಲವು ಶಾಲಾ-ಕಾಲೇಜುಗಳಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ(ban on the wearing of Hijab ) ಕರ್ನಾಟಕ ಹೈಕೋರ್ಟ್ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ (Supreme Court )ಸೋಮವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಿದೆ ಎಂದು Live Law.in ವರದಿ ಮಾಡಿದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನೊಳಗೊಂಡ ಪೀಠವು ಮೂರನೇ ದಿನವಾದ ಗುರುವಾರ ಅರ್ಜಿ ವಿಚಾರಣೆ ನಡೆಸಿದೆ.
Next Story