ಜಮ್ಮು ಕಾಶ್ಮೀರ: ಗುಂಡಿನ ಕಾಳಗ; ಓರ್ವ ಉಗ್ರ ಸಾವು, ಯೋಧನಿಗೆ ಗಾಯ
ಶ್ರೀನಗರ: ಜಮ್ಮು ಹಾಗೂ ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಶಂಕಿತ ಉಗ್ರರು ಹಾಗೂ ಭದ್ರತಾ ಪಡೆ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಶಂಕಿತ ಉಗ್ರನೋರ್ವ ಮೃತಪಟ್ಟಿದ್ದಾನೆ. ಅಲ್ಲದೆ, ಯೋಧರೋರ್ವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ಸೋಮವಾರ ತಿಳಿಸಿದ್ದಾರೆ.
ಶಂಕಿತ ಉಗ್ರರು ಅಡಗಿರುವ ಕುರಿತು ಮಾಹಿತಿಯ ಹಿನ್ನೆಲೆಯಲ್ಲಿ ಜಿಲ್ಲೆಯ ಹೆಫ್ ಶಿರ್ಮಲ್ ಪ್ರದೇಶವನ್ನು ಭದ್ರತಾ ಪಡೆಯ ಯೋಧರು ಸುತ್ತುವರಿದರು ಹಾಗೂ ಶೋಧ ಕಾರ್ಯಾಚರಣೆ ನಡೆಸಿದರು ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭ ಶಂಕಿತ ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸಿದರು. ಯೋಧರು ಪ್ರತಿ ದಾಳಿ ನಡೆಸಿದರು. ಇದರಿಂದ ಗುಂಡಿನ ಕಾಳಗ ನಡೆಯಿತು ಎಂದು ಅವರು ಹೇಳಿದ್ದಾರೆ.
ಗುಂಡಿನ ಕಾಳಗದಲ್ಲಿ ಓರ್ವ ಯೋಧ ಗಾಯಗೊಂಡಿದ್ದಾರೆ. ಶಂಕಿತ ಉಗ್ರನೋರ್ವ ಮೃತಪಟ್ಟಿದ್ದಾನೆ. ಆತನ ಗುರುತು ಇದುವರೆಗೆ ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
Next Story