ಆಂಧ್ರಪ್ರದೇಶ,ತೆಲಂಗಾಣದ ಹಲವು ಸ್ಥಳಗಳಲ್ಲಿ NIA ದಾಳಿ
Photo:PTI
ಹೊಸದಿಲ್ಲಿ: ದೇಶ ವಿರೋಧಿ ಚಟುವಟಿಕೆಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ತೊಡಗಿಸಿಕೊಂಡಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ)National Investigation Agency ರವಿವಾರ ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ ಎಂದು NDTV ವರದಿ ಮಾಡಿದೆ.
ಆಂಧ್ರಪ್ರದೇಶದ ಕರ್ನೂಲ್, ನೆಲ್ಲೂರು, ಕಡಪ ಮತ್ತು ಗುಂಟೂರು, ತೆಲಂಗಾಣದ ನಿಝಾಮಾಬಾದ್ನಾದ್ಯಂತ ಪ್ರಕರಣದ ಆರೋಪಿಗಳು ಮತ್ತು ಶಂಕಿತರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ.
ಕಳೆದ ವಾರ, ಎನ್ಐಎ ಬಿಹಾರದ ಕನಿಷ್ಠ 20 ಸ್ಥಳಗಳಲ್ಲಿ ದಾಳಿ ನಡೆಸಿತ್ತು ಹಾಗೂ ಡಿಜಿಟಲ್ ಸಾಧನಗಳು , ದಾಖಲೆಗಳು ಸೇರಿದಂತೆ " ದೋಷಾರೋಪಣೆ"ಗೆ ಸಂಬಂಧಿಸಿದ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Next Story