Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮ್ಯಾನ್ಮಾರ್-ಥಾಯ್ಲೆಂಡ್...

ಮ್ಯಾನ್ಮಾರ್-ಥಾಯ್ಲೆಂಡ್ ಗಡಿಯಲ್ಲಿ150ಕ್ಕೂ ಅಧಿಕ ಭಾರತೀಯ ಟೆಕ್ಕಿಗಳು ಬಂಡುಕೋರರ ವಶದಲ್ಲಿ?

ಸೈಬರ್ ಅಪರಾಧಗಳಿಗೆ ಬಳಕೆ

ವಾರ್ತಾಭಾರತಿವಾರ್ತಾಭಾರತಿ28 Sept 2022 1:02 AM IST
share
ಮ್ಯಾನ್ಮಾರ್-ಥಾಯ್ಲೆಂಡ್ ಗಡಿಯಲ್ಲಿ150ಕ್ಕೂ ಅಧಿಕ ಭಾರತೀಯ ಟೆಕ್ಕಿಗಳು ಬಂಡುಕೋರರ ವಶದಲ್ಲಿ?

ಹೊಸದಿಲ್ಲಿ: ಮ್ಯಾನ್ಮಾರ್‌ನ ಮಿಲಿಟರಿ ಆಡಳಿತದ ವಿರುದ್ಧ ಹೋರಾಡುತ್ತಿರುವ ಅಲ್ಲಿಯ ಭಾರೀ ಶಸ್ತ್ರಸಜ್ಜಿತ ಬಂಡುಕೋರರ ಗುಂಪು ಕರೇನ್ ನ್ಯಾಷನಲ್ ಲಿಬರೇಷನ್ ಆರ್ಮಿ (ಕೆಎನ್‌ಎಲ್‌ಎ)ಯು ಮ್ಯಾನ್ಮಾರ್-ಥಾಯ್ಲೆಂಡ್ ಗಡಿ ಪ್ರದೇಶದಲ್ಲಿ ಕನಿಷ್ಠ 150 ಭಾರತೀಯ ಐಟಿ ವೃತ್ತಿಪರರನ್ನು ತನ್ನ ವಶದಲ್ಲಿಟ್ಟುಕೊಂಡಿದೆ. ಅವರನ್ನು ಸಂಘಟಿತ ಸೈಬರ್ ಅಪರಾಧಗಳನ್ನು ಎಸಗುತ್ತಿರುವ ಮಲೇಶಿಯನ್- ಚೈನೀಸ್ ಗ್ಯಾಂಗೊಂದಕ್ಕೆ ಬಳಸಿಕೊಳ್ಳು ತ್ತಿದೆ ಎಂದು ಶಂಕಿಸಲಾಗಿದೆ.

ಕೆಎನ್‌ಎಲ್‌ಎ ನಿಯಂತ್ರಣದಲ್ಲಿ ರುವ ಮ್ಯಾನ್ಮಾರ್‌ನ ಕರೇನ್ ರಾಜ್ಯದ ಮ್ಯಾವಡ್ಡಿ ಜಿಲ್ಲೆಯಲ್ಲಿ ಇತ್ತೀಚೆಗೆ ಬಂಡುಕೋರರು ಮತ್ತು ಮ್ಯಾನ್ಮಾರ್ ಸೇನೆಯ ನಡುವೆ ಆಗಾಗ್ಗೆ ಗುಂಡಿನ ಕಾಳಗಗಳು ನಡೆದಿವೆ ಎಂದು ಭಾರತೀಯ ಭದ್ರತಾ ಏಜೆನ್ಸಿಗಳಲ್ಲಿಯ ಮೂಲಗಳು ತಿಳಿಸಿವೆ. ಕೆಎನ್‌ಎಲ್‌ಎ ಮತ್ತು ಇನ್ನೊಂದು ಬಂಡುಕೋರ ಗುಂಪು ಅರಕನ್ ಆರ್ಮಿ ಚೀನಾದಿಂದ ಭಾರೀ ಶಸ್ತ್ರಾಸ್ತ್ರಗಳನ್ನು ತರಲು ಸಾಂಪ್ರದಾಯಿಕವಾಗಿ ಮ್ಯಾವಡ್ಡಿ ಮಾರ್ಗವನ್ನೇ ಬಳಸುತ್ತಿವೆ.

ತಮಿಳುನಾಡು  ಮತ್ತು ಕೇರಳದವರೇ ಹೆಚ್ಚಿನ ಸಂಖ್ಯೆಯಲ್ಲಿ ರುವ ಸಾಫ್ಟ್‌ವೇರ್ ಇಂಜಿನಿಯರ್‌ಗಳು ಉದ್ಯೋಗ ಜಾಲದಲ್ಲಿ ಸಿಕ್ಕಿಕೊಂಡಿದ್ದರು. ದುಬೈನ ಕೆಲವು ಚೀನಿ ರಾಷ್ಟ್ರೀಯರು ನಡೆಸುತ್ತಿದ್ದ ನಾಲ್ಕು ಕಂಪೆನಿಗಳು ಭಾರತೀಯ ಟೆಕ್ಕಿಗಳನ್ನು ಕ್ರಿಪ್ಟೊ ಕರೆನ್ಸಿ ಮತ್ತು ಇತರ ಸಂಬಂಧಿತ ಅಪರಾಧಗಳು ಸೇರಿದಂತೆ ಸೈಬರ್ ವಂಚನೆಗಳಲ್ಲಿ ಬಲವಂತದಿಂದ ತೊಡಗಿಸಿದ್ದರು. ಜುಲೈನಲ್ಲಿ ವಂಚನೆಯು ಬೆಳಕಿಗೆ ಬಂದ ಬಳಿಕ ಇಂತಹ 32 ಭಾರತೀಯರನ್ನು ರಕ್ಷಿಸಲಾಗಿದೆ,ಇತರರು ತಮ್ಮನ್ನು ಬಿಡಿಸಿಕೊಳ್ಳಲು ಭಾರೀ ಒತ್ತೆಹಣವನ್ನು ನೀಡಿದ್ದರು ಎನ್ನಲಾಗಿದೆ.

ಈ ಟೆಕ್ಕಿಗಳ ರಕ್ಷಣೆಗೆ ನೆರವಾಗಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ಗಳಲ್ಲಿ ಲಭ್ಯ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಯತ್ನಿಸುತ್ತಿದೆ, ಆದರೆ ನಿಖರವಾದ ತಳಮಟ್ಟದ ಮಾಹಿತಿಗಳ ಕೊರತೆಯು ಈ ಟೆಕ್ಕಿಗಳನ್ನು ರಕ್ಷಿಸುವ ಅಧಿಕಾರಿಗಳ ಪ್ರಯತ್ನಗಳನ್ನು ವಿಳಂಬಿಸುತ್ತಿದೆ ಎನ್ನಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X